ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಉಪ ರಾಷ್ಟ್ರಪತಿ ಹುದ್ದೆ: ಗೋಪಾಲಕೃಷ್ಣ ಗಾಂಧಿಗೆ ಬೆಂಬಲ ನೀಡಲು ನಿತೀಶ್ ಕುಮಾರ್ ಒಪ್ಪಿಗೆ

ನಿನ್ನೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದ...

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
Sumana Upadhyaya
Updated On : 12 Jul 2017, 12:33 pm
ನವದೆಹಲಿ: ನಿನ್ನೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್ ಇಂದು ಉಪ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿತೀಶ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ತಮ್ಮ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಕೋರಿದ್ದರು.
ಉಪ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನು ಸೂಚಿಸಲು ನಿನ್ನೆ ವಿರೋಧ ಪಕ್ಷಗಳು ದೆಹಲಿಯಲ್ಲಿ ಸಭೆ ಸೇರಿದ್ದವು. ನಿನ್ನೆ ನಡೆದ ಸಭೆಯಲ್ಲಿ ನಾಯಕರೆಲ್ಲಾ ಒಟ್ಟಾಗಿ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಅವರನ್ನು ಸ್ಪರ್ಧೆಗೆ ನಿಲ್ಲಿಸಲು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

Advertisement

Advertisement

ನಿತೀಶ್ ಕುಮಾರ್ ಅವರು ದೂರವಾಣಿ ಮೂಲಕ ರಾಹುಲ್ ಗಾಂಧಿಗೆ, ಗೋಪಾಲಕೃಷ್ಣ ಗಾಂಧಿಗೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ ಎಂದು ಗೊತ್ತಾಗಿದೆ. 
18 ವಿರೋಧ ಪಕ್ಷಗಳ ನಾಯಕರು ನಿನ್ನೆ ದೆಹಲಿಯಲ್ಲಿ ಸಭೆ ಸೇರಿ ಗೋಪಾಲಕೃಷ್ಣ ಗಾಂಧಿಯವರನ್ನೇ ಉಪ ರಾಷ್ಟ್ರಪತಿ ಸ್ಥಾನಕ್ಕೆ ನಿಲ್ಲಿಸುವುದಾಗಿ ಅವಿರೋಧವಾಗಿ ತೀರ್ಮಾನಕ್ಕೆ ಬಂದರು.
ನಿನ್ನೆ ನಡೆದ ಸಭೆಯಲ್ಲಿ ಶರದ್ ಯಾದವ್ ನೇತೃತ್ವದ ಸಂಯುಕ್ತ ಜನತಾ ದಳ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments