ಸಂಗ್ರಹ ಚಿತ್ರ 
ದೇಶ

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತೀಯ ಸೈನಿಕರಿಬ್ಬರು ಹುತಾತ್ಮ

ಬುಧವಾರ ಕುಪ್ವಾರದದಲ್ಲಿ ಪಾಕ್ ಸೈನಿಕರು ಭಾರತೀಯ ಪೋಸ್ಟ್ ಗಳತ್ತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಅಮರನಾಥ್ ಯಾತ್ರಾರ್ಥಿಗಳ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನದ ಯೋಧರಿಂದ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಬುಧವಾರ ಕುಪ್ವಾರದದಲ್ಲಿ ಪಾಕ್ ಸೈನಿಕರು ಭಾರತೀಯ ಪೋಸ್ಟ್ ಗಳತ್ತ  ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆಯಷ್ಟೇ ಭಾರತೀಯ ಸೇನಾ ಪಡೆ ಯೋಧರು ಬದ್ಗಾಮ್ ನಲ್ಲಿ ಅಕ್ರಮವಾಗಿ ಗಡಿ ಒಳನುಸುಳಲ ಪ್ರಯತ್ನಿಸುತ್ತಿದ್ದ ಮೂವರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ್ದರು. ಇದಕ್ಕೆ ಪ್ರತೀಕಾರವೆಂಬಂತೆ ಇಂದು ಭಾರತೀಯ  ಪೋಸ್ಟ್ ಗಳತ್ತ ಪಾಕಿಸ್ತಾನ ಸೈನಿಕರು ಸತತ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಪರಿಣಾಮ ಇಂದು ಕುಪ್ವಾರದಲ್ಲಿ ಪಹರೆ ನಡೆಸುತ್ತಿದ್ದ ಇಬ್ಬರು ಸೈನಿಕರು ಪಾಕ್ ಗುಂಡೇಟಿಗೆ ಬಲಿಯಾಗಿ ಹುತಾತ್ಮರಾಗಿದ್ದಾರೆ.

ಕಳೆದ ಜೂನ್ ತಿಂಗಳಲ್ಲಿ ಪಾಕಿಸ್ತಾನ ಬರೊಬ್ಬರಿ 23 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಒಂದು ಬಾರಿ ಪಾಕಿಸ್ತಾನದ ಬ್ಯಾಟ್ ಉಗ್ರರು ದಾಳಿ ಮಾಡಿದ್ದಾರೆ. ಅಂತೆಯೇ ಎರಡು ಬಾರಿ ಉಗ್ರರು ಗಡಿ ಒಳ ನುಸುಳಲು  ಪ್ರಯತ್ನಿಸಿದ್ದು, ಇದರಿಂದಾಗಿ ಒಟ್ಟು ನಾಲ್ಕು ನಾಗರಿಕರು, ಮೂವರು ಸೈನಿಕರು ಸಾವನ್ನಪ್ಪಿ ಒಟ್ಟು 12 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!