ಸಂಗ್ರಹ ಚಿತ್ರ 
ದೇಶ

1984 ಸಿಖ್ ವಿರೋಧಿ ಗಲಭೆ ಪ್ರಕರಣ: ಸೋಮವಾರದೊಳಗೆ ಕ್ಯಾಪ್ಟನ್ ಭಾಗ್ಮಲ್ ಶರಣಾಗತಿಗೆ ದೆಹಲಿ ಕೋರ್ಟ್ ಸೂಚನೆ!

1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಪ್ಟನ್ ಭಾಗ್ಮಲ್ ಅವರು ಜುಲೈ 17 ಸೋಮವಾರದೊಳಗೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗಡುವು ನೀಡಿದೆ.

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಪ್ಟನ್ ಭಾಗ್ಮಲ್ ಅವರು ಜುಲೈ 17 ಸೋಮವಾರದೊಳಗೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗಡುವು ನೀಡಿದೆ.

1984 ಸಿಖ್ ವಿರೋಧಿ ಗಲಭೆ ಪ್ರಕರಣದ ದೆಹಲಿ ಕಂಟೋನ್ಮೆಂಟ್ ನ ರಾಜ್ ನಗರ ಪ್ರದೇಶದಲ್ಲಿ ಒಂದೇ ಕುಟುಂಬದ ಐವರ ಸಾವಿನ ಪ್ರಕರಣ ಸಂಬಂಧ ಬಾಗ್ಮಲ್ ಅಪರಾಧಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿದ್ದು, ಇದೇ  ಪ್ರಕರಣ ಸಂಬಂಧ ಸೋಮವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ಕ್ಯಾಪ್ಟನ್ ಭಾಗ್ಮಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು  ನ್ಯಾಯಾಲಯ ತಿರಸ್ಕರಿಸಿದ್ದು, ನ್ಯಾಯಾಲಯಕ್ಕೆ ಶರಣಾಗಬೇಕಿದೆ.

ಇದೇ ಪ್ರಕರಣದ ಪ್ರಮುಖ ಆರೋಪಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರೊಂದಿಗೆ ಕ್ಯಾಪ್ಟನ್ ಭಾಗ್ಮಲ್ ಕೂಡ ಅಪರಾಧಿಯಾಗಿದ್ದು, ಭಾಗ್ಮಲ್ ಅವರಿಗೆ ನ್ಯಾಯಾಲಯ ಈ ಹಿಂದೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ  ಭಾಗ್ಮಲ್ ಜೈಲು ಸೇರಿದ್ದರಾದರೂ ತಮ್ಮ ಪತ್ನಿಗೆ ಶಸ್ತ್ರಿ ಚಿಕಿತ್ಸೆ ಮಾಡಿಸಬೇಕು ಎಂದು ಕೋರಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

ಆಗಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಖೋಖರ್, ಕ್ಯಾಪ್ಟನ್ ಭಾಗ್ಮಾಲ್, ಗಿರ್ಧರಿ ಲಾಲ್ ಮತ್ತು ಇನ್ನಿತರರು ಒಂದು ಕುಟುಂಬದ ಐದು ಸದಸ್ಯರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ  ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಈ ಐವರ ಪೈಕಿ ಮೂರು ಆರೋಪಿಗಳು 2013 ರ ಮೇ ತಿಂಗಳಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪೈಕಿ ಸಜ್ಜನ್ ಕುಮಾರ್ ಅವರನ್ನು ನ್ಯಾಯಾಲಯ ಬಿಡುಗಡೆ  ಮಾಡಿತ್ತಾದರೂ, ಖೋಖರ್, ಕ್ಯಾಪ್ಟನ್ ಭಾಗ್ಮಾಲ್, ಗಿರ್ಧರಿ ಲಾಲ್ ಅವರಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?