ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ನಮ್ಮದೇ ಮಗುವನ್ನು ನಾವು ಕೊಲ್ಲುವುದಿಲ್ಲ: ಮಹಾಮೈತ್ರಿ ಕುರಿತು ಸಿಎಂ ನಿತೀಶ್ ಕುಮಾರ್ ಸ್ಪಷ್ಟನೆ

ಭ್ರಷ್ಟಾಚಾರ ಆರೋಪ ಸಂಬಂಧ ಆರ್'ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಮೂಡಿರುವ ಬಿರುಕು ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ನಮ್ಮ ಸ್ವಂತ ಮಗುವನ್ನು ನಾವು ಕೊಲ್ಲುವುದಿಲ್ಲ ಎಂದು ಬುಧವಾರ...

ನವದೆಹಲಿ: ಭ್ರಷ್ಟಾಚಾರ ಆರೋಪ ಸಂಬಂಧ ಆರ್'ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಮೂಡಿರುವ ಬಿರುಕು ಕುರಿತಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ನಮ್ಮ ಸ್ವಂತ ಮಗುವನ್ನು ನಾವು ಕೊಲ್ಲುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ. 
ಕಾಂಗ್ರೆಸ್ ಬಗ್ಗೆ ಜೆಡಿಯು ಅಸಮಾಧಾನಗೊಂಡಿರುವ ಬೆನ್ನಲ್ಲೇ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ದೂರವಾಣಿ ಕರೆ ಮುಖಾಂತರ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿತ್ತು. ಮಾತುಕತೆ ವೇಳೆ ಆರ್'ಜೆಡಿ-ಜೆಡಿಯು ಬಿಕ್ಕಿಟ್ಟಿನ ಬಗ್ಗೆ ಸೋನಿಯಾ, ರಾಹುಲ್ ಪ್ರಸ್ತಾಪ ಮಾಡಿದ್ದರು ಎಂದು ಹೇಳಲಾಗುತ್ತಿತ್ತು. 
ಮಹಾಮೈತ್ರಿ ಕುರಿತಂತೆ ಮೂಡಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿರುವ ನಿತೀಶ್ ಕುಮಾರ್ ಅವರು, ಇದು ನಮ್ಮ ಸ್ವಂತ ಮಗು, ಸ್ವಂತ ಮಗುನ್ನು ಹೇಗೆ ಕೊಲ್ಲಲು ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. 
ತಮ್ಮ ವಿರುದ್ದ ಕೇಳಿ ಬಂದಿರುವ ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ನನ್ನ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರಾಜಕೀಯ ಷಡ್ಯಂತ್ರ. ಪ್ರಧಾನಮಂತ್ರಿ ನರೇಂದ್ರ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಮ್ಮ ವಿರುದ್ಧ ಸಂಚು ರೂಪಿಸಿದ್ದಾರೆಂದು ಆರೋಪಿಸಿದ್ದರು. 
ವಿರೋಧ ಪಕ್ಷಗಳು ರಾಜಕೀಯ ಹಗೆತನಕ್ಕೆ ನನ್ನನ್ನು ಗುರಿಯಾಗಿಸಿಕೊಳ್ಳಲಾಗಿದೆ. ಬಿಹಾರದಲ್ಲಿ ಆರ್ ಜೆಡಿ ಮತ್ತು ಜೆಡಿಯು-ಕಾಂಗ್ರೆಸ್ ಮೈತ್ರಿ ಅಬಾಧಿತವಾಗಿದೆ. 2004ರಲ್ಲಿ ನನ್ನ ವಿರುದ್ಧ ದಾಖಲಾದ ಪ್ರಕರಣಗಳನ್ನು ಮತ್ತೆ ಕೆದಕಲಾಗುತ್ತಿದೆ. 2004ರಲ್ಲಿ ನನಗೆ ಮೀಸೆಯೇ ಬಂದಿರಲಿಲ್ಲ. 
13-14 ವರ್ಷದ ಬಾಲಕನಿಂದ ಇದನ್ನೆಲ್ಲಾ ಮಾಡಲು ಹೇಗೆ ಸಾಧ್ಯೆ? ನಾನು ಯಾವುದೇ ತಪ್ಪು ಮಾಡಿಲ್ಲ. ಇದೊಂದು ಸಂಚು. ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡಾಗಿನಿಂದಲೂ ಭ್ರಷ್ಟಾಚಾರದ ವಿರುದ್ಧ ಶೂನ್ಯ ಸೈರಣೆ ಹೊಂದಿದ್ದೇನೆ. ನಾನು ನಿರ್ವಹಿಸುತ್ತಿರುವ ಮೂರು ಇಲಾಖೆಗಳಲ್ಲಿ ಒಂದೇ ಒಂದು ಭ್ರಷ್ಟಾಚಾರ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ