ಸುಪ್ರೀಂ ಕೋರ್ಟ್ 
ದೇಶ

ಮೂರೂವರೆ ಸಾವಿರ ಮಕ್ಕಳ ಅಶ್ಲೀಲ ವೆಬ್ ಸೈಟ್ ಗಳಿಗೆ ತಡೆ: ಸುಪ್ರೀಂ ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಮಕ್ಕಳಲ್ಲಿ ಅಶ್ಲೀಲ ವಿಷಯಗಳನ್ನು ತುಂಬುವುದನ್ನು ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು...

ನವದೆಹಲಿ: ಮಕ್ಕಳಲ್ಲಿ ಅಶ್ಲೀಲ ವಿಷಯಗಳನ್ನು ತುಂಬುವುದನ್ನು ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ನಿಟ್ಟಿನಲ್ಲಿ  ಅಂತಹ ವಿಷಯಗಳನ್ನು ನೀಡುವ ಸುಮಾರು ಮೂರೂವರೆ ಸಾವಿರ ವೆಬ್ ಸೈಟ್ ಗಳನ್ನು ಕಳೆದ ತಿಂಗಳು ಬ್ಲಾಕ್ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠಕ್ಕೆ ತಿಳಿಸಿದ ಕೇಂದ್ರ ಸರ್ಕಾರ, ಮಕ್ಕಳ ಪೊರ್ನೊಗ್ರಫಿ ವಿಷಯಗಳು ಮಕ್ಕಳಿಗೆ ಸಿಗುವುದನ್ನು ತಡೆಯಲು ಶಾಲೆಗಳಲ್ಲಿ ಜ್ಯಾಮರ್ ಗಳನ್ನು ಸ್ಥಾಪಿಸಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ)ಗೆ ಹೇಳಲಾಗಿದೆ ಎಂದು ತಿಳಿಸಿದೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಎಂ.ಎಂ.ಶಾಂತನಗೌಡರ್ ನ್ಯಾಯಪೀಠಕ್ಕೆ ಉತ್ತರಿಸಿ, ಶಾಲಾ ಬಸ್ಸುಗಳಲ್ಲಿ ಜ್ಯಾಮರ್ ಗಳನ್ನು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ ಜ್ಯಾಮರ್ ಗಳ ಸ್ಥಾಪನೆ ಸಾಧ್ಯವಿಲ್ಲ. ಅಶ್ಲೀಲ ಚಿತ್ರಗಳು ಮತ್ತು ವಿಷಯಗಳನ್ನು ತೋರಿಸುವ ವೆಬ್ ಸೈಟ್ ಗಳಿಗೆ ಕಡಿವಾಣ ಹಾಕಲು ಸಾಧ್ಯತೆಯನ್ನು ಪರಿಶೀಲಿಸುವಂತೆ ಸಿಬಿಎಸ್ ಇಯನ್ನು ಸರ್ಕಾರ ಕೋರಿದೆ. ಮಕ್ಕಳ ಪೊರ್ನೊಗ್ರಫಿಗೆ ಕಡಿವಾಣ ಹಾಕಲು ತೆಗೆದುಕೊಂಡಿರುವ ಕ್ರಮಗಳ ಕುರಿತು ಸ್ಥಿತಿ ವರದಿಯನ್ನು ಸಲ್ಲಿಸಲಾಗುವುದು ಎಂದು ಪಿಂಕಿ ಆನಂದ್ ನ್ಯಾಯಾಲಯಕ್ಕೆ ತಿಳಿಸಿದರು.
ಸ್ಥಿತಿ ವರದಿಯನ್ನು ಎರಡು ದಿನಗಳೊಳಗೆ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ನ್ಯಾಯಾಲಯ ಸರ್ಕಾರಕ್ಕೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ