ಅಜ್ಜಿ ಮನೆಯಿಂದ ಬರುವಾಗ ರಾಹುಲ್ ಗಾಂಧಿ ಬರಿಗೈಯಲ್ಲಿ ಬಂದಿದ್ದಾರೆ: ಬಿಜೆಪಿ ಗೇಲಿ
ಅಪಕ್ವ ಎಂದು ಭಾರತೀಯ ಜನತಾ ಪಕ್ಷದವರಿಂದ ಕರೆಸಿಕೊಂಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್...
ಅಂಬಲ(ಹರ್ಯಾಣ): ಅಪಕ್ವ ಎಂದು ಭಾರತೀಯ ಜನತಾ ಪಕ್ಷದವರಿಂದ ಕರೆಸಿಕೊಂಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮೇಲೆ ಅದೇ ಪಕ್ಷದ ಮತ್ತೊಬ್ಬರು ಟೀಕಿಸಿದ್ದಾರೆ, ಅಜ್ಜಿ ಮನೆಗೆ ಹೋಗಿದ್ದ ರಾಹುಲ್ ಗಾಂಧಿ ಏನೂ ಕಲಿಯದೆ ಖಾಲಿ ಕೈಯಿಂದ ಹಿಂತಿರುಗಿದ್ದಾರೆ ಎಂದು ಹರ್ಯಾಣ ಕ್ರೀಡಾ ಸಚಿವ ಅನಿಲ್ ವಿಜ್ ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗೆ ರಾಹುಲ್ ಗಾಂಧಿಯವರು ಇಟೆಲಿಗೆ ಪ್ರವಾಸ ಹೋಗಿ ಬಂದಿದ್ದರು. ಅಲ್ಲಿ ತಮ್ಮ ಅಜ್ಜಿ ಮನೆಗೆ ಹೋಗಿದ್ದ ರಾಹುಲ್ ಗಾಂಧಿ ಏನಾದರೂ ಕಲಿತು ಸ್ವಲ್ಪ ಬುದ್ಧಿವಂತರಾಗಿ ಬರುತ್ತಾರೆ ಎಂದು ನಂಬಿದ್ದೆ. ಆದರೆ ಅವರು ಖಾಲಿ ಕೈಯಿಂದ ಮರಳಿದ್ದಾರೆ ಎಂದು ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ಮುಂದುವರಿಸಿದ ಸಚಿವರು, ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಘರ್ಷಣೆಗಳಿಗೆ ಅವರೇ ಕಾರಣ. ಕಾಶ್ಮೀರದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿದ ರೀತಿ, ಕಾಂಗ್ರೆಸ್ ಸರ್ಕಾರವಿದ್ದಾಗ ಜಾರಿಗೆ ತಂದ ನೀತಿಗಳು ಪ್ರತ್ಯೇಕವಾದಿಗಳನ್ನು ಬೆಳೆಸಿದೆ. ಇದರಿಂದಾಗಿ ಕಾಶ್ಮೀರದಲ್ಲಿ ಇಂದು ಈ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ದೇಶದ ಜನತೆಯ ಕ್ಷಮೆಯಾಚಿಸಬೇಕು. ಪ್ರಧಾನ ಮಂತ್ರಿ ಮೋದಿಯವರು ದೇಶದಲ್ಲಿ ಭಯೋತ್ಪಾದನೆಯನ್ನು ಹತ್ತಿಕ್ಕಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.