ಸಂಸತ್ತು 
ದೇಶ

ಲೋಕಸಭೆಯಲ್ಲಿ ಶೇ.50 ರಷ್ಟು ಮೀಸಲಾತಿಗೆ ಮಹಿಳಾ ಸಂಘಟನೆಗಳ ಆಗ್ರಹ

ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಲೋಕಸಭೆಯಲ್ಲಿ ಮಹಿಳೆಯರ ಮೀಸಲಾತಿ ಮಸೂದೆಯನ್ನು ಜುಲೈ 17 ರಂದು ಆರಂಭವಾಗುವ ಮಾನ್ಸೂನ್ ...

ನವದೆಹಲಿ: ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಲೋಕಸಭೆಯಲ್ಲಿ ಮಹಿಳೆಯರ ಮೀಸಲಾತಿ ಮಸೂದೆಯನ್ನು ಜುಲೈ 17 ರಂದು ಆರಂಭವಾಗುವ ಮಾನ್ಸೂನ್ ಅಧಿವೇಶನದಲ್ಲಿ ಜಾರಿಗೆ ತರಬೇಕೆಂದು ವಿವಿಧ ಮಹಿಳಾ ಸಂಘಟನೆಗಳು ಒತ್ತಾಯಿಸಿವೆ.
ಸುಮಾರು 1,600 ಮಹಿಳಾ ಸಂಘಟನೆಗಳು ಒಗ್ಗೂಡಿ ಮೀಸಲಾತಿ ಮಸೂದೆ ಜಾರಿಗೆ ಆಗ್ರಹಿಸಿವೆ, ನಮಗೆ 33 ಪರ್ಸೆಂಟ್ ಮೀಸಲಾತಿ ಬೇಡ ಶೇ.50 ರಷ್ಟು ಮೀಸಲಾತಿ ಬೇಕು ಎಂದು ಸಂಘಟನೆಗಳು ಘೋಷಣೆ ಕೂಗಿವೆ.
ಆಫ್ರಿಕಾ ಸಂಸತ್ತಿನಲ್ಲಿ  ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪ್ರತಿನಿಧಿಗಳು ಇರುವುದಕ್ಕೆ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಹೇಳುತ್ತಾರೆ, ಭಾರತದಲ್ಲಿ ಮಹಿಳಾ ಮೀಸಲಾತಿ ಬಗ್ಗೆ ಒಂದು ಮಾತನ್ನೂ ಆಡುವುದಿಲ್ಲ ಎಂದು ಭಾರತೀಯ ಮಹಿಳೆಯರ ರಾಷ್ಟ್ರೀಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಣ್ಣಿ ರಾಜಾ ಆರೋಪಿಸಿದ್ದಾರೆ.
ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಿಗೆ ಮಹಿಳೆಯರು ಸ್ಪರ್ಧಿಸಲು ಸಮರ್ಥರಾಗಿದ್ದಾರೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಶೇ. 12 ರಷ್ಟು ಸಂಸತ್ತಿನಲ್ಲಿ,  ಶೇ. 9ರಷ್ಟು ಮಾತ್ರ ವಿಧಾನಸಭೆಯಲ್ಲಿ ಮಹಿಳೆಯರಿದ್ದಾರೆ ಎಂದು ಸಾಮಾಜಿಕ ಸಂಶೋಧನಾ ಕೇಂದ್ರದ ನಿರ್ದೇಶಕಿ ರಂಜನಾ ಕುಮಾರಿ ಹೇಳಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ರಾಜಕೀಯಕ್ಕೆ ಬರದಿದ್ದರೇ ಅವರ ಬಗ್ಗೆಗಿನ ಕಾಳಜಿಗಳು ಪರಿಣಾಮಕಾರಿಯಾಗಿರುವುದಿಲ್ಲ ಎಂದು ತಿಳಿಸಿದ್ದಾರೆ.
2014ರ ಚುನಾವಣಾ ಪ್ರಣಾಳಿಕೆಯಲ್ಲಿ ಮಹಿಳಾ ಮೀಸಲಾತಿಗೆ ಬೆಂಬಲ ನೀಡುವುದಾಗಿ ಬಿಜೆಪಿ ಘೋಷಿಸಿತ್ತು. ಈಗ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಲು ಇದು ಸಕಾಲ ಎಂದು ಸಂಘಟನೆಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT