ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ಓರ್ವ ಭಾರತೀಯ ಯೋಧ ಹುತಾತ್ಮ
ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ....
ಜಮ್ಮು: ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿರುವುದಾಗಿ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ರಾಜೋರಿ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕಾಶ್ಮೀರದ ಪೂಂಚ್ ಜಿಲ್ಲೆಯ ಲ್ಯಾನ್ಸ್ ನಾಯಕ್ ಮೊಹಮ್ಮದ್ ನಾಸೀರ್ ಅವರು ಹುತಾತ್ಮರಾಗಿದ್ದಾರೆ ಎಂದು ವಕ್ತಾರರು ಹೇಳಿದ್ದಾರೆ.
ಇಂದು ಮಧ್ಯಾಹ್ನ 1.30ರ ಸುಮಾರಿಗೆ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಜುಲೈ 12ರಂದು ಉತ್ತರ ಕಾಶ್ಮೀರದ ಕೆರನ್ ಸೆಕ್ಟರ್ ನಲ್ಲಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.