ರಾಜೀನಾಮೆ ನೀಡುವಂತೆ ತೇಜಸ್ವಿ ಯಾದವ್ ನ್ನು ನಿತೀಶ್ ಕುಮಾರ್ ಕೇಳಿಲ್ಲ: ಜೆಡಿಯು ನಾಯಕ ಕೆಸಿ ತ್ಯಾಗಿ
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಕೇಳಿಲ್ಲ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.
ನವದೆಹಲಿ: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಕೇಳಿಲ್ಲ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.
ರಾಜೀನಾಮೆ ನೀಡುವಂತೆ ನಿತೀಶ್ ಕುಮಾರ್ ಕೇಳಿಲ್ಲವಾದರೂ, ತೇಜಸ್ವಿ ಯಾದವ್ ಭ್ರಷ್ಟಾಚಾರದ ಆರೋಪದಿಂದ ಮುಕ್ತರಾಗಿ ಹೊರಬರಬೇಕು ಎಂದು ಜೆಡಿಯು ಸಂದೇಶ ರವಾನೆ ಮಾಡಿದೆ ಎಂದು ಕೆಸಿ ತ್ಯಾಗಿ ತಿಳಿಸಿದ್ದಾರೆ. ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ವಿ ಯಾದವ್ ಹೆಸರು ಎಫ್ಐಆರ್ ನಲ್ಲಿ ದಾಖಲಾಗಿದ್ದು, ವಿಪಕ್ಷಗಳಿಂದ ರಾಜೀನಾಮೆ ಒತ್ತಡ ಹೆಚ್ಚುತ್ತಿದೆ. ಈ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸಚಿವ, ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದರು.
ಇದಕ್ಕೂ ಮುನ್ನ ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ ಎಂಬ ವರದಿಗಳು ಪ್ರಕಟವಾಗಿತ್ತು. ಆದರೆ ಈಗ ಜೆಡಿಯು ಸ್ಪಷ್ಟನೆ ನೀಡಿದ್ದು, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಕೇಳಿಲ್ಲ, ಆದರೆ ಅವರು ಭ್ರಷ್ಟಾಚಾರ ಆರೋಪದಿಂದ ಮುಕ್ತರಾಗಬೇಕೆಂಬ ಸಂದೇಶ ರವಾನಿಸಿದೆ ಎಂದು ಹೇಳಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.