ಶ್ರೀನಗರ: ಜು.10 ರಂದು ನಡೆದ ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್ಐಟಿ) ಓರ್ವ ಪೊಲೀಸ್ ಅಧಿಕಾರಿಯನ್ನು ಬಂಧಿಸಿದೆ.
ಪೊಲೀಸ್ ಅಧಿಕಾರಿ ಭಯೋತ್ಪಾದಕ ದಾಳಿಗೆ ಸಹಕಾರ ನೀಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಪಿಡಿಪಿ ಶಾಸಕನೂ ಶಾಮೀಲಾಗಿರುವ ಬಗ್ಗೆ ಮಾಹಿತಿ ದೊರೆತಿದ್ದು, ಈ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ.
ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ಇದಾಗಿದ್ದು, ಬಂಧಿತ ಪೊಲೀಸ್ ಪುಲ್ವಾಮ ಜಿಲ್ಲೆಗೆ ಸೇರಿದವರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.