ಕಮಲ್ ಹಾಸನ್ 
ದೇಶ

ಭ್ರಷ್ಟಾಚಾರ ಆರೋಪ ಸಾಬೀತು ಮಾಡಿ: ಕಮಲ್ ಹಾಸನ್ ಗೆ ತಮಿಳುನಾಡು ಸಚಿವ ಸವಾಲು

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ....

ಕೊಯಮತ್ತೂರು: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂಬ ಖ್ಯಾತ ತಮಿಳು ನಟ ಕಮಲ್ ಹಾಸನ್ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ತಮಿಳುನಾಡು ಪೌರಾಡಳಿತ ಸಚಿವ ಎಸ್ ಪಿ ವೇಲುಮಣಿ ಅವರು, ಆರೋಪವನ್ನು ಸಾಬೀತುಪಡಿಸುವಂತೆ ನಟನಿಗೆ ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿದ್ದರೆ ಅದನ್ನು ಬಹಿರಂಗಪಡಿಸಲಿ ಎಂದು ತಮಿಳುನಾಡು ಸಚಿವರು ಹೇಳಿದ್ದಾರೆ. ಅಲ್ಲದೆ ಕಮಲ್ ಹಾಸನ್ ಅವರು ತಮ್ಮ ಚಿತ್ರಗಳಿಗೆ ತೆರಿಗೆ ಕಟ್ಟಿರುವ ಮಾಹಿತಿ ನೀಡಲು ಸಿದ್ಧರಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕಮಲ್ ಹಾಸನ್ ಅವರು ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ವೇಲುಮಣಿ ಅವರು, ಕಮಲ್ ಹಾಸನ್ ಅವರು ಈ ಮುಂಚೆ ಈ ರೀತಿಯ ಆರೋಪ ಮಾಡಿಲ್ಲ. ಆದರೆ ಇತ್ತೀಚಿಗೆ ಹಲವು ವಿಚಾರಗಳ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡುವ ಮುನ್ನ ಅವರು ಸೂಕ್ತ ಮಾಹಿತಿ ಸಂಗ್ರಹಿಸುವುದು ಸೂಕ್ತ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ