ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಜು.15 ರಂದು ಸಭೆ ನಡೆಸಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಕಾಶ್ಮೀರದ ಬಿಕ್ಕಟ್ಟಿನಲ್ಲಿ ಸಹಕರಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.
ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ, ಕಾಶ್ಮೀರ ಕಣಿವೆ ಬಿಕ್ಕಟ್ಟಿಗೆ ಸಿಲುಕಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಸ್ಥಳೀಯ ಜನತೆ ಸಹಕರಿಸಿ, ಬೆನ್ನಿಗೆ ನಿಂತಿದ್ದರು, ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಜಿಎಸ್ ಟಿ ಜಾರಿಯ ಬಗ್ಗೆಯೂ ಮಾತನಾಡಿರುವ ಮೆಹಬೂಬಾ ಮುಫ್ತಿ, ಜಿಎಸ್ ಟಿ ಮಸೂದೆಯನ್ನು ಅಂಗೀಕರಿಸುತ್ತಿದ್ದಂತೆಯೇ ಆರ್ಟಿಕಲ್ 370 ಬಗ್ಗೆ ವಿಶೇಷ ಗಮನ ಹರಿಸುವುದಾಗಿ ರಾಷ್ಟ್ರಪತಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.