ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಭಾರತೀಯ ಸೇನೆ ಶನಿವಾರ ಹೇಳಿದೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಭಾರತೀಯ ಸೇನೆ ಶನಿವಾರ ಹೇಳಿದೆ.
ಕಾಶ್ಮೀರ ಪರಿಸ್ಥಿತಿ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಮಾಂಡರ್ ಲೆ.ಜ.ಜೆ.ಎಸ್ ಸಂಧು ಅವರು, ಅಮರನಾಥ ಯಾತ್ರೆ ದಾಳಿಯೊಂದು ಪುನರಾವರ್ತನೆಯಷ್ಟೇ. ಆದರೆ, ಉಗ್ರರ ವಿರುದ್ಧದ ನಮ್ಮ ಕಾರ್ಯಾಚರಣೆ ಮುಂದುವರೆಯಲಿದೆ. ಉಗ್ರರ ಸದೆಬಡಿಯುವ ನಮ್ಮ ಕಾರ್ಯಾಚರಣೆ ಮುಂದುವರೆಯಲಿದ್ದು, ಕಾಶ್ಮೀರದಲ್ಲಿನ ಪರಿಸ್ಥಿತಿ ಮತ್ತಷ್ಟು ಸುಧಾರಿಸಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಪರಿಸ್ಥಿತಿ ಹದಗೆಡುವ ಬಗ್ಗೆ ಸೇನೆ ಚಿಂತಿಸುವುದಿಲ್ಲ. ಕಾಶ್ಮೀರದಲ್ಲಿ ನಿರ್ಮಾಣವಾಗಿರುವ ಶಾಂತಿಯುತ ವಾತಾವರಣ ಹೀಗೆಯೇ ಮುಂದುವರೆಯಲಿದೆ. ದೇಶ ರಕ್ಷಿಸಲು ಕಾಶ್ಮೀರದ ಯುವಕರು ಸಿದ್ಧರಿದ್ದು, ನೇಮಕಾತಿ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.