ದೇಶ

ಜು.17ರಿಂದ ಸಂಸತ್ ಮುಂಗಾರು ಅಧಿವೇಶನ: ಸರ್ವಪಕ್ಷ ಸಭೆ ಕರೆದ ಸ್ಪೀಕರ್ ಸುಮಿತ್ರಾ ಮಹಾಜನ್

Manjula VN
ನವದೆಹಲಿ: ಜು.17ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಈ ಹಿನ್ನಲೆಯಲ್ಲಿ ಜು.16ರಂದು ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆ ಕರೆದಿದ್ದಾರೆ. 
ಸೋಮವಾರದಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭಗೊಳ್ಳುತ್ತಿದ್ದು. ಅಧಿವೇಶನಕ್ಕೂ ಮುನ್ನ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ಕೋರಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. 
ಜು.17ರಿಂದ ಆರಂಭವಾಗುತ್ತಿರುವ ಸಂಸತ್ ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಮಸೂದೆ, ನೋಟು ನಿಷೇಧ ವಿಚಾರ ಸೇರಿದಂತೆ ದೇಶದಲ್ಲಿ ಎದುರಾಗಿರುವ ಇನ್ನಿತರೆ ಸಮಸ್ಯೆಗಳ ಕುರಿತಂತೆ ಸರ್ಕಾರದ ವಿರುದ್ಧ ಟೀಕಾಸ್ತ್ರ ನಡೆಸಲು ವಿರೋಧ ಪಕ್ಷಗಳು ಸಿದ್ಧತೆ ನಡೆಸಿವೆ. 
ಅಧಿವೇಶನದಲ್ಲಿ ಲೋಕಸಭಾ ಸದಸ್ಯರಾಗಿದ್ದ ವಿನೋದ್ ಖನ್ನಾ ಮತ್ತು ರಾಜ್ಯಸಭಾ ಸದಸ್ಯೆ ಪಲ್ಲವಿ ರೆಡ್ಡಿ ಅವರ ನಿಧನಕ್ಕೆ ಸಂತಾಪ ಸೂಚಿಸಿ ಮೊದಲ ದಿನದ ಕಲಾಪವನ್ನು ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
SCROLL FOR NEXT