ನವದೆಹಲಿ: ಬಿಹಾರದ ಮಹಾ ಮೈತ್ರಿಯಲ್ಲಿ ಉಂಟಾಗಿರುವ ಬಿರುಕು ಮತ್ತಷ್ಟು ಹೆಚ್ಚಿದ್ದು, ಸಿಎಂ ನಿತೀಶ್ ಕುಮಾರ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಗೈರು ಹಾಜರಾಗಿದ್ದಾರೆ.
ಪಾಟ್ನಾದ ಜ್ಞಾನ್ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಯುವ ಕೌಶಲ್ ದಿವಸ್ ಕಾರ್ಯಕ್ರಮದಲ್ಲಿ ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಭಾಗಿಯಾಗಬೇಕಿತ್ತು, ಆದರೆ ಗೈರು ಹಾಜರಾದ ಕಾರಣ ಅವರ ನಾಮಫಲಕವನ್ನು ಮುಚ್ಚಿ, ನಂತರ ತೆರವುಗೊಳಿಸಲಾಗಿದೆ.
ತೇಜಸ್ವಿ ಯಾದವ್ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಆರ್ ಜೆಡಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ, ಜೆಡಿಯುಗೆ ಮುಜುಗರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ತೇಜಸ್ವಿ ಯಾದವ್ ರಾಜೀನಾಮೆ ಕೇಳಿದ್ದರು ಎಂಬ ವರದಿಗಳು ಪ್ರಕಟವಾಗಿತ್ತು. ಇದೇ ಕಾರಣದಿಂದ ಜೆಡಿಯು, ಆರ್ ಜೆಡಿ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಈಗ ಅದು ಮತ್ತಷ್ಟು ಹೆಚ್ಚಿದೆ ಎಂದು ವಿಶ್ಲೇಷಿಸಲಾಗುತ್ತಿದೆ.