ದೇಶ

ವಿಧಾನಸಭೆಯಲ್ಲಿ ಸ್ಫೋಟಕ ಪತ್ತೆ: ಎನ್ಐಎ ತನಿಖೆಗೆ ಆದೇಶಿಸುವಂತೆ ಕೇಂದ್ರಕ್ಕೆ ಉ.ಪ್ರದೇಶ ಸರ್ಕಾರ ಮನವಿ

Manjula VN
ಲಖನೌ: ವಿಧಾನಸಭೆಯಲ್ಲಿ ಸ್ಫೋಟಕ ವಸ್ತು ಪತ್ತೆಯಾದ ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ) ತನಿಖೆಗೆ ಆದೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ಮನವಿ ಮಾಡಿದೆ. 
ನಿನ್ನೆಯಷ್ಟೇ ವಿರೋಧ ಪಕ್ಷದ ಶಾಸಕರೊಬ್ಬರ ಕುರ್ಚಿಯ ಕೆಳಗೆ ಪಿಇಟಿಎನ್ ಸ್ಫೋಟಕ ವಸ್ತು ಪತ್ತೆಯಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಎನ್ಐಎ ತನಿಖೆ ಮನವಿ ಮಾಡಿಕೊಂಡಿದ್ದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು, ಕೇಂದ್ರ ಗೃಹ ಸಚಿವಾಲಯ ಔಪಚಾರಿಕ ಆದೇಶ ನೀಡಿದ ಬಳಿಕವಷ್ಟೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತೇವೆಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರಕ್ಕೆ ಮನವಿ ಮಾಡಿರುವ ಉತ್ತರಪ್ರದೇಶ ಸರ್ಕಾರ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಮನವಿ ಮಾಡಿಕೊಂಡಿದೆ. 
ಬಿಗಿ ಭದ್ರತೆಯುಳ್ಳ ವಿಧಾನಸಭೆಯೊಳಗೇ ಸ್ಫೋಟಕ ವಸ್ತುಗಳು ಪತ್ತೆಯಾಗಿರುವುದು ರಾಜ್ಯದ ಜನತೆಯಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಸ್ಫೋಟಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ವಿಧಾನಸಭೆಯ ಆವರಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಿಧಾನಸಭೆಗೆ ಬರುವ ಪ್ರತೀಯೊಬ್ಬರನ್ನೂ ತಪಾಸಣೆಗೊಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. 
SCROLL FOR NEXT