ನವದೆಹಲಿ: ಕೇಂದ್ರ ಸರ್ಕಾರದ ಹಠಮಾರಿತನದ ಧೋರಣೆಯಿಂದ ಕಾಶ್ಮೀರದ ಸಮಸ್ಯೆ ಮತ್ತಷ್ಟು ತೀವ್ರವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಆರೋಪಿಸಿದ್ದಾರೆ.
ಅಮರನಾಥ ಯಾತ್ರಿಕರ ಮೇಲಿನ ಭಯೋತ್ಪಾದಕ ದಾಳಿ, ಚೀನಾದೊಂದಿಗಿನ ಗಡಿ ವಿವಾದ ಹಾಗೂ ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ವಿಪಕ್ಷಗಳಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರ ಸರ್ಕಾರದ ಹಠಮಾರಿತನದಿಂದಲೇ ಕಾಶ್ಮೀರದ ಸಮಸ್ಯೆ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ.
ಕಾಶ್ಮೀರದ ಜನತೆ ಇಬ್ಬರು ಹಠಮಾರಿಗಳ ನಡುವೆ ಸಿಲುಕಿದ್ದಾರೆ, ಒಂದು ಕೇಂದ್ರ ಸರ್ಕಾರವಾದರೆ ಮತ್ತೊಂದು ಭಯೋತ್ಪಾದಕರಾಗಿದ್ದಾರೆ. ಹಠಮಾರಿಗಳಿಂದ ಜನತೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಚಿದಂಬರಂ ಹೇಳಿದ್ದಾರೆ.