ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (ಸಂಗ್ರಹ ಚಿತ್ರ)
ಪಾಟ್ನ: ತೇಜಸ್ವಿ ಯಾದವ್ ಅವರನ್ನು ಜನರು ಆಯ್ಕೆ ಮಾಡಿದ್ದಾರೆಯೇ ಹೊರತು ರಾಜಿನಾಮೆ ಕೇಳುತ್ತಿರುವವರಲ್ಲ. ತೇಜಸ್ವಿ ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ಕೊಡುವುದಿಲ್ಲ ಎಂದು ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ.
ಆರ್'ಜೆಡಿ ಮುಖ್ಯಸ್ಥ ಲಾಲೂ ಪುತ್ರರೂ ಆಗಿರುವ ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು. ಈ ಆರೋಪ ಬಿಹಾರ ರಾಜ್ಯ ರಾಜಕೀಯದಲ್ಲಿ ತಲ್ಲಣವನ್ನು ಮೂಡಿಸಿದ್ದು, ಮಹಾಮೈತ್ರಿ ಪಕ್ಷಗಳ ಮಧ್ಯೆ ಉಂಟಾಗಿರುವ ಬಿರುಕು ಬಿಹಾರ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಪರಿಸ್ಥಿತಿ ಎದುರಾಗುವಂತೆ ಮಾಡಿದೆ.
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜೆಡಿಯು ಪಕ್ಷದ ನಾಯಕರು ತೇಜಸ್ವಿಯವರ ರಾಜಿನಾಮೆಗೆ ಆಗ್ರಹಿಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರು, ತೇಜಸ್ವಿ ಯಾದವ್ ಅವರು ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ನೀಡಬಾರದುಎಂದು ಪಕ್ಷದ ವಿಧಾನಮಂಡಳ ನಿರ್ಧಾರ ತೆಗೆದುಕೊಂಡಿದೆ. ಕೇವಲ ಎಫ್ಐಆರ್ ದಾಖಲಾಗಿದೆ ಎಂಬ ಕಾರಣಕ್ಕೆ ರಾಜಿನಾಮೆಯನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.