ಅಪಘಾತದಲ್ಲಿ ಕಂದಕಕ್ಕೆ ಬಿದ್ದಿದ್ದ ಯಾತ್ರಾರ್ಥಿಗಳನ್ನು ರಕ್ಷಣೆ ಮಾಡುತ್ತಿರುವ ಭದ್ರತಾ ಸಿಬ್ಬಂದಿಗಳು 
ದೇಶ

ಅಮರನಾಥ ಯಾತ್ರಿಕರ ಬಸ್ ಅಪಘಾತ ಪ್ರಕರಣ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ, ಸಿಎಂ ನಿತೀಶ್

ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಘಟನೆಯಲ್ಲಿ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ...

ಜಮ್ಮು: ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಘಟನೆಯಲ್ಲಿ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಹಾರ ರಾಜ್ಯ ಮುಖ್ಯಮಂತ್ರಿ  ಪರಿಹಾರ ಘೋಷಣೆ ಮಾಡಿದ್ದಾರೆ. 
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ರೂ.2 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ. 
ಅಪಘಾತದಕ್ಕೀಡಾದ ಬಸ್ ನಲ್ಲಿ ಬಹುತೇಕರು ರಾಜಸ್ತಾನ ಹಾಗೂ ಬಿಹಾರ ರಾಜ್ಯದ ಮೂಲದವರೇ ಆಗಿದ್ದು, ಇದರಂತೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೂ ಕೂಡ ಅಪಘಾತದಲ್ಲಿ ಮೃತಪಟ್ಟಿರುವ ತಮ್ಮ ರಾಜ್ಯದ ಜನರಿಗೆ ರೂ.4 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 
ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಮತ್ತೊಂದು ದುರಂತ ಇದಾಗಿದೆ. ಅಮರನಾಥ ಯಾತ್ರಿಕರನ್ನು ಸಾಗಿಸುತ್ತಿದ್ದ ಬಸ್'ವೊಂದು ನಿನ್ನೆ ನಾಚ್ಲಾನಾ ಕಣಿವೆ ಮಾರ್ಗದಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾಗಿತ್ತು. ಈ ವೇಳೆ ಬಸ್ ಕದಕಕ್ಕೆ ಉರುಳಿಬಿದ್ದಿ ಪರಿಣಾಮ 17 ಮಂದಿ ಯಾತ್ರಿಕರು ಸಾವನ್ನಪ್ಪಿ. 35ಕ್ಕೂ ಹೆಚ್ಚು ಮಂದಿಗೆ ಗಾಯವಾಗಿಗೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!