ಮುಂಬೈ: ಮುಂಬೈ ಸರಣಿ ಸ್ಫೋಟ ಪ್ರಕರಣ ಸಂಬಂಧ ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಅಪರಾಧದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವುದನ್ನು ಮಹಾರಾಷ್ತ್ರ ಸರ್ಕಾರ ಸಮರ್ಥಿಸಿಕೊಂಡಿದ್ದು, ಈ ಸಂಬಂಧ ಸೋಮವಾರ ಬಾಂಬೆ ಹೈಕೋರ್ಟ್ ಪ್ರಮಾಣ ಪತ್ರ ಸಲ್ಲಿಸಿದೆ.
ಜೈಲು ನಿಯಮಗಳ ಪ್ರಕಾರವೇ ಸಂಜಯ್ ದತ್ ಅವರ ಶಿಕ್ಷೆಯನ್ನು ಕಡಿತಗೊಳಿಸಲಾಗಿದೆ. ಇಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಇಂದು ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.
ಜೂನ್ 12ರಂದು ಪುಣೆಯ ನಿವಾಸಿ ಪ್ರದೀಪ್ ಭಾಲೆಕರ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ದತ್ ನಡವಳಿಕೆ ಉತ್ತಮ ಎಂದು ಅಧಿಕಾರಿಗಳು ಹೇಗೆ ನಿರ್ಧರಿಸಿದ್ದರು ಎಂದು ಪ್ರಶ್ನಿಸಿತ್ತು. ಅಲ್ಲದೆ ಈ ಕುರಿತು ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತ್ತು.
ಪುಣೆಯ ಯೆರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ದತ್ ಅವರನ್ನು 2016ರ ಫೆಬ್ರುವರಿಯಲ್ಲಿ, ಶಿಕ್ಷೆಯ ಅವಧಿ ಪೂರ್ಣಗೊಳ್ಳಲು ಎಂಟು ತಿಂಗಳು ಬಾಕಿ ಇರುವಾಗಲೇ ಸನ್ನಡತೆಯ ಆಧಾರದಲ್ಲಿ ಬಿಡುಗಡೆ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics