ಸಂಗ್ರಹ ಚಿತ್ರ 
ದೇಶ

ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಓರ್ವ ಯೋಧ ಹುತಾತ್ಮ, 6 ವರ್ಷದ ಬಾಲಕಿ ಸಾವು

ಜಮ್ಮು ಮತ್ತು ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆ ಗುರಿಯಾಗಿರಿಸಿಕೊಂಡು ಪಾಕಿಸ್ತಾನ ನಡೆಸುತ್ತಿರುವ...

ಪೂಂಚ್ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನೆ ಗುರಿಯಾಗಿರಿಸಿಕೊಂಡು ಪಾಕಿಸ್ತಾನ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿ 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವುದಾಗಿ ಸೋಮವಾರ ತಿಳಿದುಬಂದಿದೆ. 
ಜಮ್ಮು ಮತ್ತು ಕಾಶ್ಮೀರದ ರಜೌರಿ ಹಾಗೂ ಪೂಂಚ್ ಜಿಲ್ಲೆಗಳ ಮಂಜಕೋಟೆ ಮತ್ತು ಭಿಂಬರ್ ಗರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ನಡುವೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿಗೆ ಜಮ್ಮು ಮತ್ತು ಕಾಶ್ಮೀರದ ತ್ರಾಲ್ ಮೂಲದವರಾಗಿರುವ ಭಾರತೀಯ ಯೋಧ ನಾಯಕ್ ಮುದ್ದಾಸರ್ ಅಹ್ಮದ್ ಎಂಬುವವರು ಹುತಾತ್ಮರಾಗಿದ್ದು, 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. 
ಪೂಂಚ್ ಜಿಲ್ಲೆಯ ಬಾಲಕೋಟೆಯಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ನಡೆಸಲಾದ ಅಪ್ರಚೋದಿತ ಗುಂಡಿನ ದಾಳಿಗೆ ಸಾಜಿದಾ ಕಫೀಲ್ ಎಂಬ ಬಾಲಕಿ ಮೃತಪಟ್ಟಿದ್ದಾಳೆಂದು ತಿಳಿದುಬಂದಿದೆ. 
ಜು.12 ರಂದು ಕೂಡ ಪಾಕಿಸ್ತಾನ ಸೇನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘಿನೆ ಮಾಡಿತ್ತು. ಈ ವೇಳೆ ಪಾಕ್ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಜೂನ್ ತಿಂಗಳಿನಲ್ಲಿ ಪಾಕಿಸ್ತಾನ ಒಟ್ಟು 23 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿರುವುದಾಗಿ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಸ್ಮಿತ್ ಮಚ್ಚರ್ ಬಗ್ಗೆ ಮೌನವೇಕೆ: ನನ್ನ ಆದರ್ಶ ಧ್ರುವ ರಾಠಿ ಅಲ್ಲ: ಶಿವಸೇನೆ UBT ತೊರೆದ ರಾಷ್ಟ್ರೀಯ ವಕ್ತಾರ ಆನಂದ್ ದುಬೆ!

ಮಧ್ಯಪ್ರದೇಶ: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾ ಮರಿ ಸಾವು!

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!