ದೇಶ

ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವೆಂಕಯ್ಯ ನಾಯ್ಡು ಹೆಸರು ಮುಂಚೂಣಿಯಲ್ಲಿ

Srinivas Rao BV
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಈ ಬಾರಿ ದಕ್ಷಿಣ ಭಾರತದವರನ್ನು ಆಯ್ಕೆ ಮಾಡಬೇಕೆಂಬ ಉದ್ದೇಶ ಇದೆ ಎಂದು ವಿಶ್ಲೇಷಿಸಲಾಗುತ್ತಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಎನ್ ಡಿಎ ಅಭ್ಯರ್ಥಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. 
ಜು.17 ರಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ವೆಂಕಯ್ಯ ನಾಯ್ಡು ಅವರ ಹೆಸರು ಮುಂಚೂಣಿಯಲ್ಲಿದ್ದು, ಅವರನ್ನೇ ಆಯ್ಕೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಇದೆ. ಇದಕ್ಕೆ ಪೂರಕವೆಂಬಂತೆ ವೆಂಕಯ್ಯ ನಾಯ್ಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. 
ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 
SCROLL FOR NEXT