ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಂಡಿಪೋರಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ಸಂಗ್ರಹ ಚಿತ್ರ
Manjula VN
Updated On : 18 Jul 2017, 2:34 am
ಬಂಡಿಪೋರಾ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾರತೀಯ ಸೇನಾ ಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ಬಂಡಿಪೋರಾ ಜಿಲ್ಲೆ ಗುರೇಜ್ ಸೆಕ್ಟರ್ ಬಳಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿ ತಿಳಿದ ಕೂಡಲೇ 36 ರಾಷ್ಟ್ರೀಯ ರೈಫಲ್ಸ್ (ಆರ್'ಆರ್) ಪಡೆ ಕಾರ್ಯಾಚರಣೆಗಿಳಿದಿತ್ತು. 
ಇದರಂತೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದು, ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 

Advertisement

Advertisement

ಕಳೆದ ರಾತ್ರಿ ಕೂಡ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿದ್ದ ಭದ್ರತಾ ಸಿಬ್ಬಂದಿಗಳು ಮೂವರು ಉಗ್ರರನ್ನು ಹತ್ಯೆ ಮಾಡಿತ್ತು. ಉಗ್ರರನ್ನು ಹತ್ಯೆ ಮಾಡಿದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ದಕ್ಷಿಣ ಕಾಶ್ಮೀರದಲ್ಲಿರುವ ಶಾಲೆ ಹಾಗೂ ಕಾಲೇಜುಗಳನ್ನು ಬಂದ್ ಮಾಡಿಸಿದೆ. ಅಲ್ಲದೆ, ವದಂತಿಗಳು ಹರಡದಂತೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ  ಭದ್ರತೆಯನ್ನು ಹೆಚ್ಚಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments