ಸಂಗ್ರಹ ಚಿತ್ರ 
ದೇಶ

ಎರಡು ದಶಕ ಬಳಿಕ ಸೇನೆಯಿಂದ ಸೈನಿಕರಿಗೆ ಬುಲೆಟ್ ಪ್ರೂಫ್ ಹೆಲ್ಮೆಟ್ ಖರೀದಿ!

ಮಹತ್ವದ ಬೆಳವಣಿಗೆಯಲ್ಲಿ ಗಡಿ ಕಾಯುವ ಯೋಧರಿಗೆ ಬುಲೆಟ್ ಪ್ರೂಫ್ ಜಾಕೆಟ್ ಮತ್ತು ಹೆಲ್ಮೆಟ್ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಗಡಿ ಕಾಯುವ ಯೋಧರಿಗೆ ಬುಲೆಟ್ ಪ್ರೂಫ್ ಜಾಕೆಟ್ ಮತ್ತು ಹೆಲ್ಮೆಟ್ ಒದಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಈ ಹಿಂದೆಯೇ ಬುಲೆಟ್ ಪ್ರೂಫ್ ಜಾಕೆಟ್ ಗಳೊಂದಿಗೆ ಬುಲೆಟ್ ಪ್ರೂಫ್ ಹೆಲ್ಮೆಟ್ ಗಳನ್ನೂ ಕೂಡ ಒದಗಿಸುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತಾದರೂ, ಇದೀಗ ಅದರ ಮುಂದುವರಿದ ಭಾಗ ಎಂಬಂತೆ  ಸೈನಿಕರಿಗೆ ಬುಲೆಟ್ ಪ್ರೂಫ್ ಹೆಲ್ಮೆಟ್ ಗಳನ್ನೂ ಕೂಡ ವಿತರಿಸಲಾಗುತ್ತಿದೆ. ಅದರಂತೆ ಸುಮಾರು 1.58 ಲಕ್ಷ ಬುಲೆಟ್ ಪ್ರೂಫ್ ಹೆಲ್ಮೆಟ್ ಗಳನ್ನು ಸೈನಿಕರಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಸುಮಾರು 75000  ಬುಲೆಟ್ ಪ್ರೂಫ್ ಹೆಲ್ಮೆಟ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅತ್ಯಾಧುನಿಕ ಮತ್ತು ಅಗತ್ಯ ಸೌಲಭ್ಯಕ್ಕೆ ಸೇನೆ ಪದೇ ಪದೇ ಬೇಡಿಕೆ ಸಲ್ಲಿಸುತ್ತಿದ್ದರೂ, ಇದೀಗ ಎರಡು ದಶಕಗಳ ಬಳಿಕ ಬುಲೆಟ್ ಪ್ರೂಫ್ ಹೆಲ್ಮೆಟ್ ಖರೀದಿಗೆ ಸರ್ಕಾರ ಮುಂದಾಗಿದೆ. ಮೇಕ್ ಇನ್ ಇಂಡಿಯಾ ಯೋಜನೆಯಡಿ  ದೇಶೀಯವಾಗಿ ತಯಾರಾಗುವ ಎಂಕೆಯು ಸಿಸ್ಟಮ್ಸ್ ಕಂಪನಿಯ ಹೆಲ್ಮೆಟ್ ಅನ್ನು ಸೈನಿಕರಿಗೆ ಒದಗಿಸಲಾಗುತ್ತದೆ. ಎಂಕೆಯು ಸಿಸ್ಟಮ್ಸ್ ಸೇನೆ ಮತ್ತು ಭದ್ರತಾ ಪಡೆಗಳಿಗೆ ಅಗತ್ಯವಿರುವ ಹಲವು ಉಪಕರಣಗಳನ್ನು ತಯಾರಿಸಿ ರಫ್ತು  ಮಾಡುತ್ತದೆ. ಆದರೆ ಇದೇ ಮೊದಲ ಬಾರಿಗೆ ಭಾರತೀಯ ಸೇನೆಗೆ ಬುಲೆಟ್ ಪ್ರೂಫ್ ಹೆಲ್ಮೆಟ್ ಒದಗಿಸಲಿದೆ ಎಂದು ಸಂಸ್ಥೆಯ ಹಿರಿಯ ಮಾರುಕಟ್ಟೆ ಅಧಿಕಾರಿ ರಾಜೇಶ್ ಗುಪ್ತಾ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ದರ್ಜೆಯ ಮತ್ತು ಗುಣಮಟ್ಟದ ಹೆಲ್ಮೆಟ್ ಇವಾಗಿದ್ದು, ಸೇನೆಯು 1.58 ಲಕ್ಷ ಹೆಲ್ಮೆಟ್​ ಗೆ ಬೇಡಿಕೆ ಸಲ್ಲಿಸಿದೆ. ಅವುಗಳನ್ನು ಮುಂದಿನ ಮೂರು ವರ್ಷದೊಳಗಾಗಿ ಕಂಪನಿ ಪೂರೈಸಲಿದೆ. ಹಗುರವಾದ ಈ ಹೆಲ್ಮೆಟ್​ ಗಳನ್ನು ಮೊದಲ ಹಂತದಲ್ಲಿ ಗಡಿ ಕಾಯುವ ಮತ್ತು ವಿವಿಧ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ಯೋಧರಿಗೆ ಒದಗಿಸಲಾಗುತ್ತದೆ. ಜತೆಗೆ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್​ ಗಳನ್ನು ಒದಗಿಸಲು ಕೂಡ ಸರ್ಕಾರ  ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಸೇನೆಗೆ ವಿಶಿಷ್ಠ ಸೇನಾ ವಾಹನಗಳು, ಡ್ರೋನ್ ಗಳು ಮತ್ತು ಉತ್ತಮ ಬಂದೂಕುಗಳ ಅಗತ್ಯತೆ ಕೂಡ ಇದೆ ಎಂದು ನಿವೃತ್ತ ಕರ್ನಲ್ ಕೆವಿ ಕುಬೇರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಚೀನಾದೇಶ ಗಡಿಯಲ್ಲಿ ತಂಟೆ  ಮಾಡುತ್ತಿರುವ ಈ ಸಂದರ್ಭದಲ್ಲಿ ಸೈನಿಕರಿಗೆ ನೈತಿಕಸ್ಥೈರ್ಯದ ಅಗತ್ಯತೆ ಇದೆ. ಸೇನೆಗೆ ಅಗತ್ಯ ಪರಿಕರಗಳನ್ನು ಖರೀದಿ ಮಾಡುವ ಮೂಲಕ ಸೇನೆಯನ್ನು ಬಲಿಷ್ಠಗೊಳಿಸಬೇಕು ಎಂದು ಅವರ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ