ನವದೆಹಲಿ: ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ರಾಜ್ಯಸಭೆಯಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.
ಸಂಸತ್ ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ರಾಜ್ಯಸಭಾ ಕಲಾಪದಲ್ಲಿ ಪಾಲ್ಗೊಂಡಿದ್ದ ಮಾಯಾವತಿ ಉತ್ತರ ಪ್ರದೇಶದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ಕುರಿತು ಮಾಡಲು ಬಯಸಿದ್ದರು. ಇದಕ್ಕೆ ಸಭಾಪತಿ ಅವಕಾಶ ನೀಡಿದ್ದರಿಂದ ರಾಜ್ಯಸಭೆ ಸದಸ್ಯತ್ವಕ್ಕೆ ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದರು.
ಕೊನೆಗೂ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡದ್ದರಿಂದ ಕೋಪಗೊಂಡ ಅವರು ನುಡಿದಂತೆ ರಾಜ್ಯಸಭೆಗೆ ರಾಜಿನಾಮೆ ನೀಡಿದ್ದಾರೆ.