ದೇಶ

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ: ಎಫ್ಐಆರ್ ದಾಖಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

Lingaraj Badiger
ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ರಾಜ್ಯ ಸರ್ಕಾರಗಳು ಕಡ್ಡಯವಾಗಿ ಎಫ್ ಐಆರ್ ದಾಖಲಿಸಬೇಕು ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ.
ಗೋರಕ್ಷಣೆ ಹೆಸರಿನಲ್ಲಿ ಜಾನುವಾರು ವ್ಯಾಪಾರಿಗಳ ಮೇಲೆ, ಗೋ ಮಾಂಸ ತಿನ್ನುವವರ ಮೇಲೆ, ಮುಸ್ಲಿಮರ ಮೇಲೆ ಹಾಗೂ ದಲಿತ ಮೇಲೆ ನಡೆಯುತ್ತಿರುವ ದಾಳಿಗಳ ಕುರಿತು ಇಂದು ಲೋಕಸಭೆಯಲ್ಲಿ ಪ್ರತಿಕ್ರಿಯಿಸಿದ ಗೃಹ ಖಾತೆ ರಾಜ್ಯ ಸಚಿವ ಹನ್ಸರಾಜ್ ಅಹಿರ್ ಅವರು, ಕಾನೂನು ಸುವವ್ಯಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದ್ದು, ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುವವವರ ವಿರುದ್ಧ ರಾಜ್ಯ ಸರ್ಕಾರಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು, ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಈ ಕೂಡಲೇ ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದರು. 
ದೆಹಲಿಯಲ್ಲಿ ಭಾನುವಾರ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಇಂತಹುದೊಂದು ಸೂಚನೆ ನೀಡಿದ್ದು, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳು ಸ್ವತಂತ್ರ್ಯ ಎಂಬ ಸಂದೇಶ ನೀಡಿದ್ದರು.
SCROLL FOR NEXT