ಪ್ರಧಾನಿಯಿಂದ, ಬಾಲಕ್ಕೆ ಬೆಂಕಿ ಹಚ್ಚಿಕೊಂಡಿರುವ ಗೋರಕ್ಷಕ ಕೋತಿಗಳ ಬಿಡುಗಡೆ: ಮಮತಾ
ರಕ್ಷಣೆ ಹೆಸರಿನಲ್ಲಿ ನಿರ್ಭಿತಿಯಿಂದ ವರ್ತಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಗೋರಕ್ಷಕರಿಗೆ ಅಧಿಕಾರ ನೀಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ .,..
ಕೊಲ್ಕೊತಾ: ಗೋರಕ್ಷಣೆ ಹೆಸರಿನಲ್ಲಿ ನಿರ್ಭಿತಿಯಿಂದ ವರ್ತಿಸಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಗೋರಕ್ಷಕರಿಗೆ ಅಧಿಕಾರ ನೀಡಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ರಾಷ್ಟ್ರಪತಿ ಚುನಾವಣೆಗೆ ಮತದಾನ ಮಾಡಿದ ನಂತರ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಪುರಾಣದ ಕಥೆಯಲ್ಲಿನ ಹನುಮಂತ ತನ್ನ ಬಾಲಕ್ಕೆ ಹಚ್ಚಿದ ಬೆಂಕಿಯಲ್ಲಿ ಇಡೀ ಲಂಕೆಯನ್ನು ಸುಟ್ಟು ಬೂದಿ ಮಾಡಿದಂತೆ, ಗೋರಕ್ಷಣೆ ಹೆಸರಲ್ಲಿ ಬಾಲಕ್ಕೆ ಬೆಂಕಿ ಹಚ್ಚಿಕೊಂಡಿರುವ ಕೋತಿಗಳನ್ನು ಸ್ವತಃ ಪ್ರಧಾನಿಯವರೇ ಬಿಡುಗಡೆ ಮಾಡಿದ್ದಾರೆ, ಕೇಂದ್ರ ಹಚ್ಚಿರುವ ಈ ಬೆಂಕಿಯನ್ನು ರಾಜ್ಯಗಳು ಆರಿಸಬೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯಿಂದ ಪಶ್ಚಿಮ ಬಂಗಾಳ ನೋವನುಭವಿಸುತ್ತಿದೆ. ಚೀನಾ, ಭೂತಾನ್, ನೇಪಾಳ ಮತ್ತು ಬಾಂಗ್ಲಾ ದೇಶದೊಡನೆ ಕೇಂದ್ರ ಸಂಬಂಧ ಹಾಳುಮಾಡಿಕೊಳ್ಳುತ್ತಿರುವುದರಿಂದ ಎಂರಡು ರಾಷ್ಟ್ರಗಳ ನಡುವಿನ ತಿಕ್ಕಾಟದಲ್ಲಿ ನಾವು ತೊಂದರೆಯಲ್ಲಿ ಸಿಲುಕಿದ್ದೇವೆ ಎಂದು ಆರೋಪಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.