ದೇಶ

ಉಪ ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ವೆಂಕಯ್ಯ ನಾಯ್ಡು ನಾಮಪತ್ರ ಸಲ್ಲಿಕೆ!

Srinivasamurthy VN

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗಾಗಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಮಾಜಿ ಕೇಂದ್ರ ಸಚಿವ ವೆಂಕಯ್ಯನಾಯ್ಡು ಮಂಗಳವಾರ ಬೆಳಗ್ಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ವೆಂಕಯ್ಯ ನಾಯ್ಡು ಅವರು ನಾಮಪತ್ರ ಸಲ್ಲಿಕೆ ವೇಳೆ ಸ್ವತಃ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ರಾಮ್ ವಿಲಾಸ್ ಪಾಸ್ವಾನ್, ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ,  ಮುರಳಿ ಮನೋಹರ್ ಜೋಷಿ ಸೇರಿದಂತೆ ಹಲವು ಹಿರಿಯು ಮುಖಂಡರು ಹಾಗೂ ಕೇಂದ್ರ ಸಚಿವರ ಹಾಜರಿದ್ದರು.

ಇದಕ್ಕೂ ಮೊದಲು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದ ವೆಂಕಯ್ಯ ನಾಯ್ಡು ಅವರು ಆರ್ ಎಸ್ ಎಸ್ ಮುಖಂಡ ಮುರಳಿ ಮನೋಹರ್ ಜೋಷಿ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ಆಶೀರ್ವಾದ  ಪಡೆದರು. ಬಳಿಕ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ನಾಯ್ಡು ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಬಳಿಕ ತಮಿಳುನಾಡಿನ ಎಐಎಡಿಎಂಕೆ ಸಂಸದರು ನಾಯ್ಡು ಅವರನ್ನು ಭೇಟಿ ಮಾಡಿ, ಶುಭಾಶಯ ಕೋರಿದರು. ಸಂಸದ ತಂಬಿದೊರೈ ನೇತೃತ್ವದಲ್ಲಿ ಆಗಮಿಸಿದ ಸಂಸದರು ನಾಯ್ಡು ಅವರಿಗೆ ಶುಭ ಕೋರಿದರು.

SCROLL FOR NEXT