ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಸಿಬಿಐ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರಿಗೆ ಸಿಬಿಐ ಇಂದು ಮೂರನೇ ಬಾರಿ ಸಮನ್ಸ್ ಜಾರಿ ಮಾಡಿದ್ದು, ಶುಕ್ರವಾರ ದಕ್ಷಿಣ ದೆಹಲಿಯ ರೋಧಿ ರಸ್ತೆಯಲ್ಲಿ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಐಎನ್‌ಎಕ್ಸ್ ಮಾಧ್ಯಮ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಅವರನ್ನು ವಿಚಾರಣೆ ನಡೆಸಲು ಸಿಬಿಐ ಉದ್ದೇಶಿಸಿದೆ.
ಈ ಹಿಂದೆ ಕಾರ್ತಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಜೂನ್ 27 ಮತ್ತು 29ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿದೇಶದಲ್ಲಿರುವ ಕಾರ್ತಿ ಚಿದಂಬರಂ ಅವರು ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ಕಾಲವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics