ಶಿಮ್ಲಾ(ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಸೋಲನ್ ಗೆ ತೆರಳುತ್ತಿದ್ದ ಖಾಸಗಿ ಬಸ್ಸು ರಾಂಪುರ ಹತ್ತಿರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 28 ಮಂದಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 9.15ಕ್ಕೆ ಈ ಘಟನೆ ಸಂಭವಿಸಿದೆ. ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಶಿಮ್ಲಾದಿಂದ ಕಿನ್ನೌರ್ ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಕೆಳಗೆ ಉರುಳಿ ಕಂದಕಕ್ಕೆ ಬಿದ್ದಿತು.
ಸುತ್ತಮುತ್ತಲಿನ ನಾಗರಿಕರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಗಾಯಗೊಂಡ 7 ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.