ಅರುಣ್ ಜೇಟ್ಲಿ 
ದೇಶ

ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ, ಪ್ರತಿ ಪ್ರಕರಣದಲ್ಲೂ ಕ್ರಮ ಕೈಗೊಳ್ಳಲಾಗಿದೆ: ಜೇಟ್ಲಿ

ಸಂಸತ್ ಮುಂಗಾರು ಅಧಿವೇಶನದ ನಾಲ್ಕನೆ ದಿನವಾದ ಗುರುವಾರವೂ ಗೋ ರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ, ಭಾರತ-ಚೀನಾ ಗಡಿ....

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ನಾಲ್ಕನೆ ದಿನವಾದ ಗುರುವಾರವೂ ಗೋ ರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ, ಭಾರತ-ಚೀನಾ ಗಡಿ ವಿವಾದ ಹಾಗೂ ಎಚ್ 1-ಬಿ ವೀಸಾ ಕುರಿತು ರಾಜ್ಯಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು.
ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆಗಳನ್ನು ಖಂಡಿಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದವು.
ವಿಷಯ ಪ್ರಸ್ತಾಪಿಸಿದ ಮಾತನಾಡಿದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ಅವರು, ಗೋ ರಕ್ಷಣೆಯ ಹೆಸರಿನಲ್ಲಿ ಮಾನವರ ಹತ್ಯೆ ಒಂದು ವಿಕೃತ ಹಿಂಸೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ರಕ್ಷಣಾ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರ ಒಂದು ಗಂಭೀರ ವಿಷಯವಾಗಿದ್ದು, ಇದಕ್ಕೆ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ ಎಂದರು. ಈ ಬಗ್ಗೆ ನಾನು ಹೆಚ್ಚಿಗೆ ಹೇಳಲು ಬಯಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಈಗಾಗಲೇ ಗೋ ರಕ್ಷಕರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ ಎಂದರು.
ಪ್ರತಿ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವರು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ. ಆರೋಪಿಗಳು ಈಗ ಜೈಲಿನಲ್ಲಿದ್ದು, ಕಾನೂನು ರೀತಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜೈಟ್ಲಿ ರಾಜ್ಯಸಭೆಗೆ ತಿಳಿಸಿದ್ದಾರೆ.
ಗೋ ರಕ್ಷಣೆಯ ಹೆಸರಿನಲ್ಲಿ ಮಾನವರ ಹತ್ಯೆ ಖಂಡನೀಯ. ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ. ನಾವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆ. ಪರಸ್ಪರ ಗೌರವ ನೀಡುವುದು ನಮ್ಮ ಸಂಸ್ಕೃತಿ. ನಾವು ಯಾವುದೇ ಧರ್ಮಕ್ಕೆ ಅವಮಾನ ಮಾಡಬಾರದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ಈ ರಾತ್ರಿ ನನ್ನ ಜೊತೆ ಮಲಗು: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿತಿ ಟೇಲರ್!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!