ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿಯವರು ಗುರುವಾರ ಆಂಗೀಕರಿಸಿದ್ದಾರೆ.
ದಲಿತರ ವಿಷಯಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿ ತೀವ್ರವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದ ಮಾಯಾವತಿಯವರು, ಎರಡು ದಿನಗಳ ಹಿಂದಷ್ಟೇ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಿದ್ದರು. ಮಾಯಾವತಿಯರು ತಮ್ಮ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಉಪ ಸಭಾಪತಿ ಪಿ.ಜೆ.ಕುರಿಯನ್ ಹೇಳಿದ್ದರು.
ಇದಕ್ಕೆ ಲಿಖಿತ ಪತ್ರದ ಮೂಲಕ ಪ್ರತಿಕ್ರಿಯೆ ನೀಡಿದ್ದ ಮಾಯಾವತಿಯವರು ಮತ್ತೆ ಮರು ರಾಜೀನಾಮೆ ಸಲ್ಲಿಸಿದ್ದರು. ಈ ರಾಜೀನಾಮೆ ಪತ್ರವನ್ನು ಇದೀಗ ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿಯವರು ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.