ಜಮ್ಮು: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ- ಓರ್ವ ಸಾವು, 22 ಜನರಿಗೆ ಗಾಯ
ಜಮ್ಮು-ಪಠಾಣ್'ಕೋಟ್ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬಸ್ ಮುಖಾಮುಖಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, 22 ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ...
ಜಮ್ಮು: ಜಮ್ಮು-ಪಠಾಣ್'ಕೋಟ್ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬಸ್ ಮುಖಾಮುಖಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, 22 ಜನರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.
ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಖಾಸಗಿ ಬಸ್ ವೊಂದು ಜಮ್ಮು ಮತ್ತು ಪಠಾಣ್ ಕೋಟ್ ಹೆದ್ದಾರಿಯಲ್ಲಿ ಚಲಿಸುತ್ತಿತ್ತು. ಈ ವೇಳೆ ಎದುರಿಗೆ ಬಂದಿರುವ ಟ್ರಕ್ ವೊಂದಕ್ಕೆ ರಭಸದಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಬಸ್ ನಲ್ಲಿದ್ದ ಸ್ಥಳದಲ್ಲಿಯೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 22 ಮಂದಿಗೆ ಗಾಯಗಳಾಗಿವೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಿಗಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಗೊಂಡಿರುವ 22 ಮಂದಿಯನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.