ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

3 ವರ್ಷಗಳಲ್ಲಿ 49 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಭೇಟಿ: ಸರ್ಕಾರ ಮಾಹಿತಿ

ಪ್ರಧಾನ ನರೇಂದ್ರ ಮೋದಿಯವರ ವಿದೇಶ ಪ್ರವಾಸ ಕುರಿತು ಹಲವಾರು ಪರ-ವಿರೋಧ ಚರ್ಚೆ, ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೂರು ವರ್ಷಗಳಲ್ಲಿ ಮೋದಿಯವರು 49 ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆಂಬ ಮಾಹಿತಿಯನ್ನು...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿದೇಶ ಪ್ರವಾಸ ಕುರಿತು ಹಲವಾರು ಪರ-ವಿರೋಧ ಚರ್ಚೆ, ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೂರು ವರ್ಷಗಳಲ್ಲಿ ಮೋದಿಯವರು 49 ರಾಷ್ಟ್ರಗಳಿಗೆ ಭೇಟಿ ನೀಡಿದ್ದಾರೆಂಬ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. 
ಮೋದಿಯವರ ವಿದೇಶ ಪ್ರವಾಸ ಕುರಿತಂತೆ ರಾಜ್ಯಸಭೆಯಲ್ಲಿ ಎತ್ತಿದ ಪ್ರಶ್ನೆಗಳಿಗೆ ಲಿಖಿತ ಉತ್ತರ ನೀಡಿರುವ ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್ ಅವರು, 2014ರ ಮೊದಲ ದ್ವಿತೀಯಾರ್ಧದಲ್ಲಿ ಪ್ರಧಾನಿ 8 ರಾಷ್ಟ್ರಗಳಿಗೆ ಭೇಟಿ ಕೊಟ್ಟಿದ್ದಾರೆ. ಅವರು ಮೊದಲು ಭೇಟಿ ಕೊಟ್ಟಿದ್ದು, ಮೊದಲು ಭೇಟಿ ಕೊಟ್ಟಿದ್ದು ಭೂತಾನ್ ಆಗಿದ್ದು, ಪ್ರಸಕ್ತ ವರ್ಷದ 7 ತಿಂಗಳಲ್ಲಿ ಒಟ್ಟು 10 ದೇಶಗಳಿಗೆ ಮೋದಿ ಭೇಟಿ ನೀಡಿದ್ದಾರೆಂದು ಹೇಳಿದ್ದಾರೆ. 
ಕಳೆದ ಮೂರು ವರ್ಷಗಳಲ್ಲಿ 49 ರಾಷ್ಟ್ರಗಳಿಗೆ ಭೇಟಿ ನೀಡಿರುವ ಮೋದಿಯವರು ಭೇಟಿ ವೇಳೆ ಹಲವು ವಿವಿಧ ದೇಶಗಳ ಮುಖಂಡರ ಜೊತೆ ಮಹತ್ವದ ಚರ್ಚೆ, ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದಗಳು ಏರ್ಪಟ್ಟಿವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ