ಸುಪ್ರೀಂ ಕೋರ್ಟ್ 
ದೇಶ

ಬಾಬ್ರಿ ಮಸೀದಿ ವಿವಾದ ಪ್ರಕರಣದ ತ್ವರಿತ ವಿಚಾರಣೆ ಕುರಿತು ಶೀಘ್ರದಲ್ಲಿ ನಿರ್ಧಾರ: ಸುಪ್ರೀಂ ಕೋರ್ಟ್

ರಾಮ ಮಂದಿರ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಅಲಹಾಬಾದ್ ಹೈಕೋರ್ಟ್ ನ ತೀರ್ಪನ್ನು...

ನವದೆಹಲಿ: ರಾಮ ಮಂದಿರ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಅಲಹಾಬಾದ್ ಹೈಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ತ್ವರಿತವಾಗಿ ವಿಚಾರಣೆ ಮಾಡಬೇಕಾದ ಅರ್ಜಿಗಳ ಪಟ್ಟಿಯನ್ನು ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. 
ತ್ವರಿತ ವಿಚಾರಣೆ ಮಾಡಬೇಕಾದ ಅರ್ಜಿಗಳ ಕುರಿತು ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ. ತ್ವರಿತ ವಿಚಾರಣೆ ನಡೆಸಬೇಕಾದ ಅರ್ಜಿಗಳ ಪಟ್ಟಿ ಮಾಡಿ ಆ ಕಾರ್ಯಕ್ಕೆ ಚಾಲನೆ ನೀಡುವಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಕೋರಿದ್ದರು.
ಅಲಹಾಬಾದ್ ಹೈಕೋರ್ಟ್ ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮುಖ್ಯ ಮನವಿ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಾಗದೆ ಕಳೆದ 7 ವರ್ಷಗಳಿಂದ ಬಾಕಿ ಉಳಿದಿದೆ. ಅವುಗಳ ತ್ವರಿತ ವಿಚಾರಣೆ ನಡೆಸಬೇಕೆಂದು ಕೋರಿದರು.
ರಾಮ ಜನ್ಮಭೂಮಿ ಸ್ಥಳದಲ್ಲಿ ಪೂಜಿಸುವ ಹಕ್ಕನ್ನು ವಿಳಂಬ ಮಾಡದೆ ನೀಡಬೇಕು ಎಂದು ಕೋರಿ ಕೂಡ ಈ ಹಿಂದೆ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದೆ ಎಂದು ಸ್ವಾಮಿ ಹೇಳಿದ್ದಾರೆ. ಈ ವಿಷಯದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿದರು.
2010ರಲ್ಲಿ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಪಟ್ಟಂತೆ ತೀರ್ಪು ನೀಡಿದ್ದ ಲಕ್ನೋದ ಅಲಹಾಬಾದ್ ಹೈಕೋರ್ಟ್, ಉತ್ತರ ಪ್ರದೇಶದ ಅಯೋಧ್ಯೆಯ ವಿವಾದಿತ 2.77 ಎಕರೆ ಪ್ರದೇಶವನ್ನು ಮೂರು ಭಾಗಗಳಾಗಿ ಮಾಡುವಂತೆ ತೀರ್ಪು ನೀಡಿತ್ತು. ಮೂವರು ಸದಸ್ಯರನ್ನೊಳಗೊಂಡ ನ್ಯಾಯಪೀಠ, ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೊಹಿ ಅಖರ ಮತ್ತು ರಾಮ್ ಲಲ್ಲಾ ಮಧ್ಯೆ ಸಮನಾಗಿ ವಿಭಾಗಿಸುವಂತೆ ತೀರ್ಪು ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!