ಸಾಂದರ್ಭಿಕ ಚಿತ್ರ 
ದೇಶ

ರಾಜಸ್ಥಾನದಲ್ಲಿ ಬಸ್ ಅಪಘಾತ, 9 ಯಾತ್ರಾರ್ಥಿಗಳು ಸಾವು

ಗುಜರಾತ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಶನಿವಾರ ರಾಜಸ್ಥಾನದ ಉದಯ್ ಪುರ ಸಮೀಪ ಪಲ್ಟಿಯಾಗಿದ್ದು,....

ಜೈಪುರ: ಗುಜರಾತ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸೊಂದು ಶನಿವಾರ ರಾಜಸ್ಥಾನದ ಉದಯ್ ಪುರ ಸಮೀಪ ಪಲ್ಟಿಯಾಗಿದ್ದು, ಅಪಘಾತದಲ್ಲಿ ಆರು ಮಹಿಳೆಯರು ಸೇರಿದಂತೆ ಒಂಬತ್ತು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದಯ್ ಪುರದಿಂದ 10 ಕಿ.ಮೀ ದೂರದಲ್ಲಿರುವ ನೆಹ್ಲಾ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಉದಯ್ ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್ ಅವರು ಹೇಳಿದ್ದಾರೆ.
ಪುಷ್ಕರ ಹಾಗೂ ಹರಿದ್ವಾರ ಸೇರಿದಂತೆ ವಿವಿಧ ಧಾರ್ಮಿಕ ಕ್ಷೇತ್ರಗಳನ್ನೊಳಗೊಂಡ 16 ದಿನಗಳ ಪ್ರವಾಸಕ್ಕಾಗಿ ಖಾಸಗಿ ಬಸ್ ನಿನ್ನೆ ರಾತ್ರಿ ಗುಜರಾತ್ ನ ಅಹಮದಾಬಾದ್ ನಿಂದ ಹೊರಟಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಉದಯ್ ಪುರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!