ಲಾರ್ಡ್ಸ್'ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ವೇಳೆ ರಾಷ್ಟ್ರಧ್ವಜ ಹಾರಿಸುತ್ತಿರುವ ನಟ ಅಕ್ಷಯ್ ಕುಮಾರ್ 
ದೇಶ

ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ: ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್

ಲಾರ್ಡ್ಸ್'ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ವೇಳೆ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ...

ನವದೆಹಲಿ: ಲಾರ್ಡ್ಸ್'ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ವೇಳೆ ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ಸೋಮವಾರ ಕ್ಷಮೆಯಾಚಿಸಿದ್ದಾರೆ. 

ಐತಿಹಾಸಿಕ ಲಾರ್ಡ್ಸ್‌ ಮೈದಾನದಲ್ಲಿ ನಿನ್ನೆ ಐಸಿಸಿ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯಾವಳಿ ನಡೆಯುತ್ತಿತ್ತು. ಭಾರತ ತಂಡದ ಮಹಿಳಾ ಆಟಗಾರರಿಗೆ ನಟ ಅಕ್ಷಯ್ ಕುಮಾರ್ ಅವರು ಶುಭ ಹಾರೈಸಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಫೋಟೋವನ್ನು ಹಾಕುವ ಮೂಲಕ ಟ್ವೀಟ್ ಮಾಡಿದ್ದರು. 

ನಟ ಅಕ್ಷಯ್ ಕುಮಾರ್ ಅವರು ರಾಷ್ಟ್ರಧ್ವಜವನ್ನು ಹಿಡಿದುಕೊಂಡಿದ್ದ ಫೋಟೋವನ್ನು ಹಾಕಿದ್ದರು. ಫೋಟೋದಲ್ಲಿ ಅಕ್ಷಯ್ ಅವರು ಹಸಿರು ಬಣ್ಣ ಮೇಲೆ ಹಾಗೂ ಕೇಸರಿ ಬಣ್ಣ ಕೆಳಗೆ ಹಿಡಿದುಕೊಂಡಿರುವುದು ಕಂಡುಬಂದಿತ್ತು. ಇದಕ್ಕೆ  ಸಾಕಷ್ಟು ವಿರೋಧ ಹಾಗೂ ಆಕ್ರೋಶಗಳು ವ್ಯಕ್ತವಾಗಿದ್ದವು. ಅಕ್ಷಯ್ ಅವರು ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಫೋಟೋವನ್ನು ಟ್ವಿಟರ್ ನಿಂದ ತೆಗೆದು ಹಾಕಿರುವ ಅಕ್ಷಯ್ ಅವರು ಕ್ಷಮೆಯಾಚಿಸಿದ್ದಾರೆ. 

ರಾಷ್ಟ್ರಧ್ವಜ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಮುಜುಗರಕ್ಕೀಡು ಮಾಡುವ ಉದ್ದೇಶ ನನ್ನದಾಗಿರಲಿಲ್ಲ. ಫೋಟೋವನ್ನು ತೆಗೆದು ಹಾಕಲಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ