ಕೇಂದ್ರ ಸಚಿವೆ ಮನೇಕಾ ಗಾಂಧಿ 
ದೇಶ

ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳವೇ, ಶಿ-ಬಾಕ್ಸ್ ನಲ್ಲಿ ದೂರು ಸಲ್ಲಿಸಿ

ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿರುವ ಮಹಿಳೆಯರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳಕ್ಕೆ...

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿರುವ ಮಹಿಳೆಯರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳಕ್ಕೆ ಒಳಗಾದರೆ ದೂರು ಸಲ್ಲಿಸಲು ಆನ್ ಲೈನ್ ಪೋರ್ಟಲ್ ನ್ನು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಾರಂಭಿಸಿದೆ.
ಕೆಲಸದ ಸ್ಥಳದಲ್ಲಿ ಮಹಿಳೆಯರು ಎದುರಿಸುವ ಲೈಂಗಿಕ ಕಿರುಕುಳದ ಸ್ವರೂಪ ಮತ್ತು ಪ್ರಮಾಣವನ್ನು ಅಂದಾಜು ಮಾಡಲು ಸದ್ಯದಲ್ಲಿಯೇ ರಾಷ್ಟ್ರೀಯ ಸಮೀಕ್ಷೆಯೊಂದನ್ನು ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಮನೇಕಾ ಗಾಂಧಿ ಪೋರ್ಟಲ್ ನ್ನು ಉದ್ಘಾಟಿಸಿದ ನಂತರ ಹೇಳಿದರು.
ಈ ಪೋರ್ಟಲ್ ಗೆ ಶಿ-ಬಾಕ್ಸ್ ಎಂದು(sexual harassment electronic box) ಎಂದು ಹೆಸರಿಡಲಾಗಿದ್ದು ಅದು ಹೆಚ್ಚು ಸಕ್ರಿಯವಾಗಿರುವಂತೆ ಸಚಿವೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೋರ್ಟಲ್ ನಲ್ಲಿ ಆರಂಭದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿರುವ ಮಹಿಳೆಯರು ದೂರು ದಾಖಲಿಸಬಹುದು. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮಹಿಳೆಯರು ಕೂಡ ಲೈಂಗಿಕ ಕಿರುಕುಳ ಕೇಸುಗಳಿಗೆ ಸಂಬಂಧಪಟ್ಟಂತೆ ದೂರು ಸಲ್ಲಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಆನ್ಲೈನ್ ಇಂಟರ್ಫೇಸ್ ನಲ್ಲಿ ಮುಂದಿನ ದಿನಗಳಲ್ಲಿ ಕೆಲವು ಬದಲಾವಣೆಗಳನ್ನು ತರಲಾಗುವುದು.ಅದು ಅಂತಿಮವಾದ ನಂತರ ಖಾಸಗಿ ವಲಯಗಳಲ್ಲಿ ದುಡಿಯುವ ಮಹಿಳಾ ನೌಕರರು ಸಹ ದೂರು ದಾಖಲಿಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel