ಶಶಿ ತರೂರ್ 
ದೇಶ

ಗೌಡ್ರು ಹಿಂದಿಯಲ್ಲಿ ಮಾತನಾಡಿದ್ರು, ಆದರೆ ಏನು ಹೇಳಿದರೆಂಬುದು ನನಗೆ ಅರ್ಥವಾಗಲಿಲ್ಲ!

ಕಾಂಗ್ರೆಸ್ ಸಂಸದ ಶಶಿತರೂರ್ ಸ್ವಾತಂತ್ರ್ಯ ದಿನಾಚರಣೆಯಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಭಾಷಣವನ್ನು ನೆನಪಿಸಿಕೊಂಡಿದ್ದು, ದೇವೇಗೌಡರು ಸ್ವಾತಂತ್ರ್ಯ ದಿನಾಚರಣೆಯಂದು...

ಬೆಂಗಳೂರು: ಕಾಂಗ್ರೆಸ್ ಸಂಸದ ಶಶಿ ತರೂರ್ ಸ್ವಾತಂತ್ರ್ಯ ದಿನಾಚರಣೆಯಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಭಾಷಣವನ್ನು ನೆನಪಿಸಿಕೊಂಡಿದ್ದು, ದೇವೇಗೌಡರು ಸ್ವಾತಂತ್ರ್ಯ ದಿನಾಚರಣೆಯಂದು ಹಿಂದಿಯಲ್ಲಿ ಭಾಷಣ ಮಾಡಿದ್ದರು. ಆದರೆ ಅವರು ಏನು ಹೇಳುತ್ತಿದ್ದಾರೆಂಬುದು ಬಹುಪಾಲು ನನಗೆ ಅರ್ಥವಾಗಲಿಲ್ಲ ಎಂದಿದ್ದಾರೆ. 
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಾ ವಿವಾದದ ಬಗ್ಗೆ ಮಾತನಾಡಿದ ವೇಳೆ ಶಶಿ ತರೂರ್ ದೇವೇಗೌಡರ ಭಾಷಣವನ್ನು ಉಲ್ಲೇಖಿಸಿದ್ದು, " 49 ನೇ ಸ್ವಾತಂತ್ರ್ಯ ದಿನಾಚರಣೆಯಂದು ಅಂದಿನ ಪ್ರಧಾನಿ ದೇವೇಗೌಡರು ಕೆಂಪುಕೋಟೆಯಲ್ಲಿ ನಿಂತು ಹಿಂದಿಯಲ್ಲಿ ಭಾಷಣ ಮಾಡಿದ್ದರು. ಅವರಿಗೂ ಮುನ್ನ ಬಂದ 8 ಪ್ರಧಾನಿಗಳು 48 ಬಾರಿ ಇದೇ ರೀತಿ ಭಾಷಣ ಮಾಡಿದ್ದರಾದರೂ ದೇವೇಗೌಡರು ತಮಗೆ ಹೆಚ್ಚು ಗೊತ್ತಿಲ್ಲದ ಭಾಷೆಯಲ್ಲಿ ಭಾಷಣ ಮಾಡಿದ್ದರು. ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿಗಳು ಹಿಂದಿ ಭಾಷೆಯಲ್ಲಿ ಭಾಷಣ ಮಾಡುವುದು ಸಂಪ್ರದಾಯ, ಹಾಗಾಗಿ ಕನ್ನಡದಲ್ಲಿ ಬರೆದಿದ್ದ ಹಿಂದಿ ಭಾಷಣವನ್ನು ದೇವೇಗೌಡರು ಓದಿದ್ದರು. ಅವರು ಏನು ಹೇಳುತ್ತಿದ್ದಾರೆಂಬುದು ಬಹುಪಾಲು ನನಗೆ ಅರ್ಥವಾಗಲಿಲ್ಲ ಇಂತಹ ಸನ್ನಿವೇಶ ಮತ್ತೆಲ್ಲೂ ಸಾಧ್ಯವಾಗುವುದಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್