ನರೇಂದ್ರ ಮೋದಿ 
ದೇಶ

ಗುಜರಾತ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮೋದಿಯಿಂದ ವೈಮಾನಿಕ ಸಮೀಕ್ಷೆ

ಗುಜರಾತ್ ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ...

ನವದೆಹಲಿ: ಗುಜರಾತ್ ನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಪ್ರಧಾನಿ  ಕಾರ್ಯಾಲಯ ತಿಳಿಸಿದೆ.
ಇಂದು ಬೆಳಗ್ಗೆಯಷ್ಟೇ ಸಂಸತ್ ಭವನದಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು, ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದರು. 
ಗುಜರಾತ್ ಮುಖ್ಯಮಂತ್ರಿಯಿಂದ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪ್ರಧಾನಿ ಮೋದಿ ಅವರು ವೈಮಾನಿಕ ಸಮೀಕ್ಷೆ ನಡೆಸಲು ನಿರ್ಧರಿಸಿರುವುದಾಗಿ ಪ್ರಧಾನಿ ಕಾರ್ಯಾಲಯ ತಿಳಿಸಿದೆ.
ಸತತ ಮಳೆ ಹಾಗೂ ಪ್ರವಾಹದಿಂದಾಗಿ ಗುಜರಾತ್ ನ ಸುಮಾರು 20ಕ್ಕೂ ಅಧಿಕ ಹೆದ್ದಾರಿಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಗುಜರಾತ್ ನ ಬಹುತೇಕ ಎಲ್ಲ ನದಿಗಳು ಅಪಾಯದ  ಮಟ್ಟ ಮೀರಿ ಹರಿಯುತ್ತಿದ್ದು, ಗುಜರಾತ್ ನ ಬನಸ್ಕಾಂತ, ಸಬರ್ಕಾಂತ, ಆನಂದ್, ಪಟಾನ್ ಮತ್ತು ವಲ್ಸಾದ್ ಜಿಲ್ಲೆಗಳ ಬಹುತೇಕ ಭಾಗಗಳು ಜಲಾವೃತ್ತವಾಗಿವೆ. ಬನಸ್ಕಾಂತ ಜಿಲ್ಲೆಯೊಂದರಲ್ಲೇ ಸುಮಾರು 11 ಸಾವಿರ  ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಅಲ್ಲಲ್ಲಿ ತೆರಯಲಾಗಿರುವ ಗಂಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ನೀರಿನ ಪೂರೈಕೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ