ಸೋನಿಯಾ ಗಾಂಧಿ, ನಿತೀಶ್ ಕುಮಾರ್, ಲಾಲೂ ಪ್ರಸಾದ್ 
ದೇಶ

ಬಿಹಾರ: ಜೆಡಿಯು-ಆರ್ಜೆಡಿ ಮೈತ್ರಿಯನ್ನು ಒಡೆಯಲಾಗದು!

ಬಿಹಾರದಲ್ಲಿ ಆರ್ಜೆಡಿ ಮತ್ತು ಜೆಡಿಯು ಮೈತ್ರಿ ಸರ್ಕಾರವನ್ನು ಒಡೆಯಲು ಸಾಧ್ಯವಿಲ್ಲ ಎಂದು ಉಭಯ ಪಕ್ಷದ ನಾಯಕರು ಹೇಳಿದ್ದಾರೆ...

ಪಾಟ್ನಾ: ಬಿಹಾರದಲ್ಲಿ ಆರ್ಜೆಡಿ ಮತ್ತು ಜೆಡಿಯು ಮೈತ್ರಿ ಸರ್ಕಾರವನ್ನು ಒಡೆಯಲು ಸಾಧ್ಯವಿಲ್ಲ ಎಂದು ಉಭಯ ಪಕ್ಷದ ನಾಯಕರು ಹೇಳಿದ್ದಾರೆ.  
ಮುಂಗಾರು ಅಧಿವೇಶನ ಹಿನ್ನೆಲೆ ಮಹಾಘಟಬಂಧನ್(ಮಹಾಮೈತ್ರಿ) ಪಕ್ಷಗಳಾದ ರಾಷ್ಟ್ರೀಯ ಜನತಾದಳ(ಆರ್ಜೆಡಿ) ಮತ್ತು ಜಾತ್ಯಾತೀತ ಜನತಾದಳ(ಜೆಡಿಯು) ಬೇರೆ ಬೇರೆ ಸಭೆಗಳನ್ನು ನಡೆಸಿದ್ದವು. ನಂತರ ಮಾತನಾಡಿದ ಆರ್ಜೆಡಿ ಪಕ್ಷದ ಶಾಕ ಬಾಯ್ ಬೈರೆಂದ್ರ ಅವರು, ಇಂತಹ ಸಭೆಗಳು ಸಾಮಾನ್ಯ. ಆದರೆ ಬಿಹಾರದಲ್ಲಿ ಸರ್ಕಾರ ನಡೆಸುತ್ತಿರುವ ಆರ್ಜೆಡಿ ಮತ್ತು ಜೆಡಿಯು ತಮ್ಮ ಮೈತ್ರಿಯನ್ನು ಕಡಿದುಕೊಳ್ಳಲಿವೆ ಎಂಬ ಊಹಾಪೋಹಗಳಿಗೆ ಅಂತ್ಯವಾಡಿದ ಅವರು ಬಿಹಾರದ ಮಹಾಮೈತ್ರಿ ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.  
ಇನ್ನು ಜಾತ್ಯಾತೀತ ಜನತಾದಳ(ಜೆಡಿಯು) ನಾಯಕ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರವಣ್ ಕುಮಾರ್ ಸಹ ಇದೇ ಮಾತನ್ನು ಹೇಳಿದ್ದಾರೆ.
ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜಿನಾಮೆಗೆ ಜೆಡಿಯು ಒತ್ತಾಯಿಸುತ್ತಿದ್ದು ಈ ಮೂಲಕ ಮಹಾಮೈತ್ರಿ ಕಡಿದುಕೊಳ್ಳಲು ಜೆಡಿಯು ಮುಖ್ಯಸ್ಥ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.  
ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದ ನಂತರ ಅವರ ಪುತ್ರ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಿಬಿಐ ತನಿಖೆ ಎದುರಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ? ಸುಳಿವು ಕೊಟ್ಟ ಸಿಎಂ ಡಿಕೆ ಶಿವಕುಮಾರ್!

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್‌ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಮಳೆರಾಯನ ಮುನಿಸು: ದೇಶದಲ್ಲಿ ಶೇ.14.88ರಷ್ಟು ಮುಂಗಾರು ಕೊರತೆ!

ಟೂರಿಂಗ್ ಟಾಕೀಸ್ ಟೀಕೆ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ; ಅಶೋಕಣ್ಣ ಲೇಜಿ, ಯೂಸ್ ಲೆಸ್ ಸ್ಟಾರ್; ಸಚಿವ ಹೆಚ್.ಸಿ ಬಾಲಕೃಷ್ಣ ತಿರುಗೇಟು