ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ 
ದೇಶ

ಸೇನಾ ಮುಖ್ಯಸ್ಥರನ್ನು ಬೀದಿ ಗೂಂಡಾ ಎಂದಿದ್ದ ಕಾಂಗ್ರೆಸ್ ನಾಯಕನ ವಿರುದ್ಧ ಎಫ್ಐಆರ್ ದಾಖಲು

ಸೇನಾ ಮುಖ್ಯಸ್ಥರನ್ನು 'ಬೀದಿ ಗೂಂಡಾ' ಎಂದಿದ್ದ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ...

ಲಖನೌ: ಸೇನಾ ಮುಖ್ಯಸ್ಥರನ್ನು 'ಬೀದಿ ಗೂಂಡಾ' ಎಂದಿದ್ದ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ. 
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರನ್ನು 'ಬೀದಿ ಗೂಂಡಾ' ಎಂದ ಕಾರಣಕ್ಕೆ ಲಖನೌನಲ್ಲಿನ ಹುಸೈನ್ಗಂಜ್ ಪೊಲೀಸ್ ಠಾಣೆಯಲ್ಲಿ ಸಂದೀಪ್ ದೀಕ್ಷಿತ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. 
ಕೆಲ ದಿನಗಳ ಹಿಂದಷ್ಟೇ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಂದೀಪ್ ದೀಕ್ಷಿತ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಪಾಕಿಸ್ತಾನ ಸೇನಾ ಮುಖ್ಯಸ್ಥರು ಕೆಟ್ಟ ಭಾಷೆ ಬಳಕೆ ಮಾಡಿದರೆ, ಭಾರತೀಯ ಸೇನಾ ಮುಖ್ಯಸ್ಥರೇಕೆ ಅವರ ಹೇಳಿಕೆಗಳಿಗೆ ಬೀದಿ ಗೂಂಡಾದಂತೆ ಪ್ರತಿಕ್ರಿಯೆ ನೀಡಬೇಕು ಎಂದಿದ್ದರು. ಸೇನಾ ಮುಖ್ಯಸ್ಥರನ್ನು ಬೀದಿ ಗೂಂಡಾ ಎಂದು ಕರೆದಿದ್ದಕ್ಕೆ ಹಲವೆಡೆ ತೀವ್ರ ಖಂಡನೆಗಳು ವ್ಯಕ್ತವಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT