ಕಾರ್ಗಿಲ್ ವಿಜಯೋತ್ಸವ ದಿನ: ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಜೇಟ್ಲಿ
ನವದೆಹಲಿ: 1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು, ಹುತಾತ್ಮ ವೀರ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿಯವರು ಬುಧವಾರ ಗೌರವ ಸಲ್ಲಿಸಿದರು.
ರಾಜಧಾನಿಯ ದೆಹಲಿಯ ಇಂಡಿಯಾ ಗೇಟ್ ನಲ್ಲಿರುವ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ರಕ್ಷಣಾ ಸಚಿವ ಅರುಣ್ ಜೇಟ್ಲಿ, ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಬಿರೇಂದರ್ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾನ್ಬಾ ಗೌರವ ಅರ್ಪಿಸಿದರು.
ಕಾರ್ಗಿಲ್ ವಿಜಯೋತ್ಸವ ದಿನ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರೂ ಕೂಡ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಭಾರತೀಯ ಸೇನೆಯನ್ನು ಕೊಂಡಾಡಿದ್ದಾರೆ.
1996 ಜುಲೈ 26 ರಂದು ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಲಡಾಕ್ ಪ್ರಾಂತ್ಯ ಸೇರಿದಂತೆ ಹಿಮಾಲಯ ಪ್ರದೇಶದಲ್ಲಿ ಸುಮಾರು ಅರವತ್ತು ದಿನಗಳ ಕಾಲ ಪಾಕಿಸ್ತಾನ ಸೇನೆಯ ವಿರುದ್ಧ ಕೆಚ್ಚೆದೆಯ ಹೋರಾಟ ಮಾಡಿ ಐತಿಹಾಸಿಕ ಗೆಲವು ಸಾಧಿಸಿತ್ತು. ಈ ಹಿನ್ನಲೆಯಲ್ಲಿ ಜುಲೈ.26ರಂದು ಕಾರ್ಗಿಲ್ ವಿಜಯ್ ದಿವತ್ ಎಂದು ದೇಶದಾದ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics