ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕ ಬಸಿತ್ ನಝರ್'ನನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ.
ಸೊಪೋರ್ ನಲ್ಲಿರುವ ಮನೆಯೊಂದರಲ್ಲಿ ಬಸಿತ್ ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಿಆರ್'ಪಿಎಫ್, ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣಾ ದಳ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಕಾರ್ಯಾಚರಣೆ ವೇಳೆ ಬಸಿತ್ ನನ್ನು ಬಂಧನಕ್ಕೊಳಪಡಿಸುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಶಸ್ತ್ರಾಸ್ತ್ರಗಳು, ಪಿಸ್ತೂಲ್ ಹಾಗೂ ಸ್ಫೋಟಕ ವಸ್ತುಗಳನ್ನು ಸೇನಾಪಡೆ ವಶಕ್ಕೆ ಪಡೆದುಕೊಂಡಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.