ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.
ಟ್ವಿಟರ್ ನಲ್ಲಿ ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ್ದಕ್ಕೆ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ, ದೇಶದ 125 ಕೋಟಿ ಜನರು ನಿತೀಶ್ ಕುಮಾರ್ ಅವರ ನಡೆ ಹಾಗೂ ಪ್ರಾಮಾಣಿಕತೆಯನ್ನು ಸ್ವಾಗತಿಸಿ ಬೆಂಬಲಿಸುತ್ತಾರೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿತ್ತು, ಆದರೆ ರಾಜೀನಾಮೆ ನೀಡುವುದಿಲ್ಲ ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಘೋಷಿಸಿದ್ದರು. ಈ ಬೆಳವಣಿಗೆಗಳಿಂದ ಅಸಮಾಧಾಗೊಂಡ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿ ಮಾಡಿ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.