ನಿತೀಶ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮುಖಂಡರು 
ದೇಶ

ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ನಿತೀಶ್ ನಾಳೆ ಸಿಎಂ ಆಗಿ ಪ್ರಮಾಣ ವಚನ!

ದೇಶದ ಇತಿಹಾಸದಲ್ಲೇ ಮೊದಲು ಎಂಬಂತೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪಾಟ್ನಾ: ದೇಶದ ಇತಿಹಾಸದಲ್ಲೇ ಮೊದಲು ಎಂಬಂತೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಗುರುವಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಒಂದು ತಿಂಗಳಿನಿಂದ ಜೆಡಿಯು, ಆರ್ ಜೆಡಿ ನಡುವೆ ನಡೆಯುತ್ತಿದ್ದ ಶೀತಲ ಸಮರಕ್ಕೆ ಕೊನೆಗೂ ಸಿಎಂ ನಿತೀಶ್ ಕುಮಾರ್ ಮಂಗಳ ಹಾಡಿದ್ದು, ಜೆಡಿಯು, ಆರ್ ಜೆಡಿ ಮೈತ್ರಿಕೂಟದಿಂದ ಹೊರಬಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ತಮ್ಮ ಹಳೆಯ ಮಿತ್ರ  ಬಿಜೆಪಿಯೊಂದಿಗೆ ಸೇರಿ ಮತ್ತೆ ಬಿಹಾರದ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಈಗಾಗಲೇ ಬಿಜೆಪಿ ಪಕ್ಷ ನಿತೀಶ್ ಕುಮಾರ್ ಅವರಿಗೆ ಬೆಂಬಲ ಸೂಚಿಸಿ ಫ್ಯಾಕ್ಸ್ ಮೂಲಕ ಬಿಹಾರ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರಿಗೆ  ರವಾನಿಸಿದೆ ಎಂದು ತಿಳಿದುಬಂದಿದೆ.
ಹೀಗಾಗಿ ನಾಳೆಯೇ ಪಾಟ್ನಾದಲ್ಲಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಯು ಮೂಲಗಳ ಪ್ರಕಾರ ನಾಳೆ ಸಂಜೆ 5 ಗಂಟೆಗೆ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ  ಪ್ರಮಾಣ ಸ್ವೀಕರಿಸಲಿದ್ದು, ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲರಿಗೆ ಅನಾರೋಗ್ಯ, ಪ್ರಮಾಣ ವಚನದ ಮೇಲೆ ಕರಿನೆರಳು
ಏತನ್ಮಧ್ಯೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ನಾಳೆ ನಿತೀಶ್ ಪ್ರಮಾಣ ವಚನಕ್ಕೆ ರಾಜ್ಯಪಾಲರು ಆಗಮಿಸುತ್ತಾರೆಯೇ ಅಥವಾ ಇಲ್ಲವೇ  ಎಂಬುದನ್ನು ಕಾದು ನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ