ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಶಾನನ್ನು ಬಂಧಿಸಲಾಗಿದ್ದು, ನ್ಯಾಯಾಲಯ 7 ದಿನಗಳ ಇಡಿ (ಜಾರಿ ನಿರ್ದೇಶನಾಲಯದ) ವಶಕ್ಕೆ ನೀಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಿದ್ಧಾರ್ಥ್ ಶರ್ಮಾ ಶಾ ವಿಚಾರಣೆಗೆ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀದಿದ್ದು, ವಶಕ್ಕೆ ಪಡೆಯಲಾಗಿರುವ ಪ್ರತ್ಯೇಕತಾವಾದಿಯನ್ನು ದೆಹಲಿಗೆ ಕರೆದೊಯ್ಯಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ ನಿಂದ ಶಾ ವಿರುದ್ಧ ಜಾಮೀನು ರಹಿತ ವಾರೆಂಟ್ ಪಡೆದಿತ್ತು ಎಂದು ತಿಳಿದುಬಂದಿದೆ.
ಹವಾಲ ಡೀಲರ್ ಮುಹಮ್ಮದ್ ಅಸ್ಲಾಮ್ ವನಿ ಶಾಗೆ 2.25 ಕೋಟಿ ರೂಪಾಯಿ ನೀಡಿರುವುದಾಗಿ ಹೇಳಿದ ನಂತರ ಶಬೀರ್ ಶಾನನ್ನು ವಶಕ್ಕೆ ಪಡೆಯಲಾಗಿದೆ.