ಪ್ರವೀಣ್ ಯಾದವ್ 
ದೇಶ

ವ್ಯಾಪಂ ಹಗರಣ: ಮತ್ತೊಬ್ಬ ಆರೋಪಿ ಆತ್ಮಹತ್ಯೆಗೆ ಶರಣು

ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ವ್ಯಾಪಂ ಹಗರಣದ ಮತ್ತೊಬ್ಬ ಆರೋಪಿ ಪ್ರವೀಣ್ ಯಾದವ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬುಧವಾರ ತಿಳಿದುಬಂದಿದೆ...

ಭೋಪಾಲ್: ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ವ್ಯಾಪಂ ಹಗರಣದ ಮತ್ತೊಬ್ಬ ಆರೋಪಿ ಪ್ರವೀಣ್ ಯಾದವ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬುಧವಾರ ತಿಳಿದುಬಂದಿದೆ. 
ಮಧ್ಯಪ್ರದೇಶದ ಮೊರೆನಾದಲ್ಲಿರುವ ಸ್ವಗೃಹದಲ್ಲಿ ಪ್ರವೀಣ್ ಯಾದವ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ಸರಣಿ ಕೊಲೆಗಳಿಗೆ ವ್ಯಾಪಂ ಹಗರಣ ಪ್ರಕರಣ ಕುಖ್ಯಾತವಾಗಿದ್ದು, ಪ್ರವೀಣ್ ಸಾವು ಹಗರಣಕ್ಕೆ ಸಂಬಂಧಿಸಿದವರು ಒಬ್ಬೊಬ್ಬರಾಗಿ ಸಾವಿಗೀಡಾಗುತ್ತಿರುವವರ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. 
ಹಗರಣಕ್ಕೆ ಸಂಬಂಧಿಸಿದಂತೆ ಈ ವರೆಕೂ 25ಕ್ಕೂ ಹೆಚ್ಚು ಜನರು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದಾರೆ. ಪ್ರಕರಣ ಸಂಬಂಧ ಈ ವರೆಗೂ 2000ಕ್ಕೂ ಹೆಚ್ಚು ಜನರನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಿದ್ದಾರೆ. ಆದರೆ, ಈ ವರೆಗೂ ಹಗರಣದ ಯಾರೊಬ್ಬರ ವಿರುದ್ಧವೂ ಕಾನೂನು ಕ್ರಮ ಜಾರಿಗೊಳಿಸುವಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ. 
ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣ ರಾಷ್ಟ್ರ ವ್ಯಾಪ್ತಿ ಚರ್ಚೆ ಹಾಗೂ ಪ್ರತಿಭಟನೆಗೆ ಕಾರಣವಾಗಿದೆ. ಮಧ್ಯಪ್ರದೇಶದ ವೃತ್ತಿಪರ ಶಿಕ್ಷಣ ಅಥವಾ ವ್ಯವಸಾಯಿಕ್ ಪರೀಕ್ಷಾ ಮಂಡಲ್(ವ್ಯಾಪಂ) ಮಧ್ಯಪ್ರದೇಶದ ಸ್ವಾಯತ್ತ ಸಂಸ್ಥೆಯಾಗಿದೆ. 1970ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸುತ್ತದೆ. ವೃತ್ತಿ ಶಿಕ್ಷಣ ಪ್ರವೇಶ, ವೈದ್ಯರು, ಕಾನ್‌ಸ್ಟೆಬಲ್, ಶಿಕ್ಷಕರು ಮತ್ತಿತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಳನ್ನು ಈ ಮಂಡಳಿ ನಡೆಸುತ್ತಿದೆ. ವೈದ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಪರವಾಗಿ ಇನ್ನೊಬ್ಬರು ಭಾಗಿಯಾಗಿರುವುದನ್ನು ಗಮನಿಸಿದ ವೈದ್ಯರಾದ ಡಾ. ಆನಂದ್ ರಾಯ್ ಅವರು 2013ರಲ್ಲಿ ಈ ಹಗರಣವನ್ನು ಬಯಲು ಮಾಡಿದ್ದರು. ಅಲ್ಲಿಂದ ವ್ಯಾಪಂ ಸಂಬಂಧಪಟ್ಟಂತೆ ನಿಗೂಢ ಸಾವುಗಳು ಸರಣಿ ಆರಂಭವಾದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ