ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಪ್ರತಿ ವರ್ಷ 5 ಲಕ್ಷ ರಸ್ತೆ ಅಪಘಾತ, 1.50 ಲಕ್ಷ ಜನ ಸಾವು: ನಿತಿನ್ ಗಡ್ಕರಿ

ದೇಶದಲ್ಲಿ ಪ್ರತಿ ವರ್ಷ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈ ಅಪಘಾತಗಳಲ್ಲಿ ಪ್ರತಿ ವರ್ಷ 1.50 ಲಕ್ಷ ಜನ ಪ್ರಾಣ....

ನವದೆಹಲಿ: ದೇಶದಲ್ಲಿ ಪ್ರತಿ ವರ್ಷ ಐದು ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈ ಅಪಘಾತಗಳಲ್ಲಿ ಪ್ರತಿ ವರ್ಷ 1.50 ಲಕ್ಷ ಜನ ಪ್ರಾಣ ಕಳೆದುಕೊಳ್ಳುತ್ತಿರುವ ಆಘಾತಕಾರಿ ಮಾಹಿತಿಯನ್ನು ಗುರುವಾರ ಲೋಕಸಭೆಗೆ ತಿಳಿಸಲಾಗಿದೆ.
ರಸ್ತೆ ಅಪಘಾತಗಳ ಪ್ರಮಾಣ ಕಳೆದ ಮೂರು ವರ್ಷಗಳಲ್ಲಿ ಶೇ.4ರಷ್ಟು ಹೆಚ್ಚಳವಾಗಿದೆ. ಅದೇ ವೇಳೆ ದೇಶದಲ್ಲಿನ ಮೋಟಾರು ವಾಹನ ಉದ್ದಿಮೆಯು ಶೇ.22ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಇಂದು ಲೋಕಸಭೆಗೆ ತಿಳಿಸಿದ್ದಾರೆ. 
ದೇಶದಲ್ಲಿ ಸುಮಾರು ಶೇ.30ರಷ್ಟು ಬೋಗಸ್‌ ಲೈಸನ್ಸ್‌ಗಳು ಚಾಲ್ತಿಯಲ್ಲಿವೆ ಎಂದು ಗಡ್ಕರಿ ಹೇಳಿದ್ದಾರೆ.
ಇದೇ ಮೊದಲ ಬಾರಿಗೆ ನಮ್ಮ ಸಚಿವಾಲಯ  ಸೇತುವೆಗಳ ಸಮೀಕ್ಷೆ ನಡೆಸಿದ್ದು, ದೇಶದಲ್ಲಿ 1.62 ಲಕ್ಷ ಸೇತುವೆಗಳಿವೆ; ಇವುಗಳಲ್ಲಿ 1,26,233 ಮೋರಿಗಳು ಸೇರಿವೆ; 147 ಸೇತುವೆಗಳು ಅಪಾಯಕಾರಿ ಸ್ಥಿತಿಯಲ್ಲಿವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT