ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭೆಯ ಚುನಾವಣೆಯಲ್ಲಿ ಗುಜರಾತಿನಿಂದ ಸ್ಪರ್ಧಿಸಲಿದ್ದಾರೆ.
ಇದೇ ಮೊದಲ ಬಾರಿಗೆ ಶಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅಮಿತ್ ಶಾ ಇಬ್ಬಕು ಗುಜರಾತ್ ನಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ನವದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಯಿತು ಎಂದು ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಮುಂಬರುವ ಐದು ರಾಜ್ಯಗಳ ಚುನಾವಣೆ ಹೊಣೆ ಯೂ ಅವರ ಹೆಗಲಮೇಲಿದ್ದು, ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಬಿಜೆಪಿ ಪಾಳಯದಿಂದಲೇ ಕೇಳಿಬಂ ದಿತ್ತು. ಆದರೆ ಇವೆಲ್ಲದರ ನಡುವೆ ಬುಧವಾರ ಹಠಾತ್ತಾಗಿ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದ್ದಾರೆ.